Sat,Apr27,2024
ಕನ್ನಡ / English

ಕೊರೊನಾ ಸ್ಫೋಟ: ಮಂಡ್ಯದ ಗ್ರಾಮವೊಂದರಲ್ಲಿ 35 ಜನರಿಗೆ ಕೊರೊನಾ | ಜನತಾ ನ್ಯೂಸ್

15 Aug 2021
2486

ಮಂಡ್ಯ : ಒಂದೇ ಗ್ರಾಮದ 35 ಜನರಿಗೆ ಕೊರೊನಾ ಪಾಸಿಟಿವ್ ತಗುಲಿದ್ದು ಪಾಂಡುಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮವನ್ನು ಸೀಲ್​ಡೌನ್​ ಮಾಡಲಾಗಿದೆ.

ಜಿಲ್ಲೆಯ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮದಲ್ಲಿ 35 ಜನರಲ್ಲಿ ಕೊರೊನಾ ಸೋಂಕು ತಗುಲಿವುದು ತಿಳಿದುಬಂದಿದ್ದು ಗ್ರಾಮವನ್ನು ಸಂಪೂರ್ಣವಾಗಿ ಸೀಲ್​ಡೌನ್​ ಮಾಡಲಾಗಿದೆ.

ದೊಡ್ಡಬ್ಯಾಡರಹಳ್ಳಿ ಗ್ರಾ.ಪಂ ವ್ಯಾಪ್ತಿಗೆ ಸೇರಿದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಅಂತ್ಯಸಂಸ್ಕಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ , ಕೊರೊನಾ ನಿಯಮ ಉಲ್ಲಂಘಿಸಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಅಂತ್ಯ ಸಂಸ್ಕಾರದ ಬಳಿಕ ಕೆಲವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ. ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅಂತ್ಯ ಸಂಸ್ಕಾರದ ಸಮಯದಲ್ಲೇ ಕೊರೊನಾ ಹರಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಈ ವಿಷಯ ತಿಳಿದ ಶಾಸಕ ಸಿ.ಎಸ್.ಪುಟ್ಟರಾಜು, ತಹಶೀಲ್ದಾರ್ ಪ್ರಮೋದ್ ಪಾಟೀಲ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಸಿ.ಎ ಅರವಿಂದ್ ಅವರಿಗೆ ಸೂಚಿಸಿ ಗ್ರಾಮದಲ್ಲಿ ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿ ಮುಂಜಾಗೃತ ಕ್ರಮಗಳನ್ನು ಜರುಗಿಸಿ ಎಂದು ಸೂಚಿಸಿದ್ದರು.

ಗ್ರಾಮ ಒಟ್ಟು 650ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಎರಡು ದಿನದಲ್ಲಿ 35 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. 319 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಇನ್ನುಳಿದ ಗ್ರಾಮಸ್ಥರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಗ್ರಾಮದಲ್ಲಿ 184 ಮಂದಿಗೆ ಮೊದಲನೇ ಡೋಸ್ ಲಸಿಕೆ ಹಾಕಲಾಗಿದೆ. 55 ಮಂದಿ ಎರಡನೇ ಡೋಸ್ ಹಾಕಿಸಿಕೊಂಡಿದ್ದಾರೆ. ಇನ್ನೂ ಅನೇಕರಿಗೆ ಲಸಿಕೆ ಹಾಕಬೇಕಾಗಿದೆ ಎನ್ನಲಾಗಿದೆ.

RELATED TOPICS:
English summary :Mandya

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...