ತಾಯಿಯ ಹಲ್ಲಿನ ಸೆಟ್ ಮುರಿದಿದ್ದಕ್ಕೆ ಬರ್ಬರವಾಗಿ ಬಾಲಕಿ ಹತ್ಯೆ; ಆರೋಪಿ ಬಂಧನ | ಜನತಾ ನ್ಯೂಸ್

16 Aug 2021
503

ವಿಜಯಪುರ : ತಾಯಿಯ ಹಲ್ಲಿನ ಸೆಟ್ ನಾಶ ಮಾಡಿದಳೆಂಬ ಕಾರಣಕ್ಕೆ ವಿಕೃತ ಯುವಕನೊಬ್ಬ ಆರು ವರ್ಷದ ಬಾಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಂಡಿ ತಾಲೂಕಿನ ಬೋಳೆಗಾಂವ್ ಗ್ರಾಮದ ದೇವಸ್ಥಾನದ ಬಳಿ ಆಗಸ್ಟ್ 9ಕ್ಕೆ ಇದ್ದಕ್ಕಿಂದಂತೆ 6 ವರ್ಷದ ಬಾಲಕಿ ಕಾಣೆಯಾಗಿದ್ದಳು. ಎರಡು ದಿನಗಳ ಬಳಿಕ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದ ಶಂಕೆ ವ್ಯಕ್ತವಾಗಿತ್ತು. ಸೂಕ್ಷ್ಮವಾಗಿ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆಗಸ್ಟ್ 9ಕ್ಕೆ ಗ್ರಾಮದ ಆಂಜನೇಯನ ದೇವಸ್ಥಾನದ ಎದುರು ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರಿಯರು ಆಟವಾಡುತ್ತಿದ್ದರು. ಬಳಿಕ ಇಬ್ಬರಲ್ಲಿ ಓರ್ವ ಬಾಲಕಿ ಮಾತ್ರ ಮನೆಗೆ ವಾಪಸ್ ಹೋಗಿದ್ದಾಳೆ. ನಿನ್ನ ತಂಗಿ ಎಲ್ಲಿ ಮನೆಗೆ ಬರಲಿಲ್ವಾ ಎಂದು ಮನೆಯವರು ಪ್ರಶ್ನೆ ಮಾಡಿ, ವಾಪಸ್ ಹೋಗಿ ಆಕೆಯನ್ನು ಕರೆದುಕೊಂಡು ಬಾ ಅಂತ ಹೇಳುತ್ತಾರೆ. ತಂಗಿಯನ್ನು ಕರೆಯಲು ಅಪ್ರಾಪ್ತ ವಯಸ್ಸಿನ ಅಕ್ಕ ವಾಪಸ್ ದೇವಸ್ಥಾನದ ಬಳಿ ಹೋದಾಗ ಅಲ್ಲಿ ತಂಗಿ ಇರಲಿಲ್ಲ. ತಂಗಿ ಅಲ್ಲಿಲ್ಲಾ ಎಂದು ಮನೆಯಲ್ಲಿ ಬಾಲಕಿ ಹೇಳಿದಾಗ ಮನೆ ಮಂದಿಯೆಲ್ಲಾ 6 ವರ್ಷದ ಅಪ್ರಾಪ್ತೆಯನ್ನು ಹುಡುಕಾಡಿದ್ದಾರೆ. ಎಲ್ಲಿಯೂ ಬಾಲಕಿ ಕಾಣದಿದ್ದಾಗ ಹೊರ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪೊಲೀಸರು ತನಿಖೆ ನಡೆಸಿ ಅಪ್ರಾಪ್ತೆಗಾಗಿ ಶೋಧ ಕಾರ್ಯ ನಡೆಸಿದ್ದರು. ಕಾಣೆಯಾಗಿ ಎರಡು ದಿನಗಳ ಬಳಿಕ ಗ್ರಾಮದ ಹೊರ ಭಾಗದ ಹಳ್ಳದಲ್ಲಿ ಬಾಲಕಿ ಶವ ಪತ್ತೆಯಾಗಿದ್ದಳು. ಹಗ್ಗದಿಂದ ಕೈ ಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ಹಾಕಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡು ಇಂಡಿ ಡಿಎಸ್ ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿ ತನಿಖೆ ಇಳಿದ ಇಂಡಿ ಸಿಪಿಐ ರಾಜಶೇಖರ, ಹೊರ್ತಿ ಎಸ್.ಐ ಎನ್.ಬಿ.ಶಿವುರ ತಂಡ ರಚನೆ ಮಾಡಿ ಆರೋಪಿಯ ಬಂಧನಕ್ಕೆ ಜಾಲ ಬೀಸಿತ್ತು.

ಓಣಿ ನಿವಾಸಿ ಬಾಲಕಿ ಆಟವಾಡುವಾಗ ಮನೆಯ ಕಟ್ಟೆಯ ಮೇಲೆ ಇಟ್ಟಿದ್ದ ಸಂಗನಗೌಡನ ತಾಯಿ ತನ್ನ ಹಲ್ಲಿನ ಸೆಟ್ ಮುರಿದಿದ್ದಳಂತೆ. ಊಟ ಮಾಡಲು ಸಂಕಟ ಪಡಲು ಈ ಬಾಲಕಿಯೇ ಕಾರಣ ಎಂದು ಸಿಟ್ಟಿನಿಂದ ಆಕೆಯನ್ನು ಅಪಹರಿಸಿ, ಹತ್ಯೆ ಮಾಡಿ, ಸಾಕ್ಷಿ-ಪುರಾವೆ ನಾಶ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ ಸಂಗನಗೌಡ ಬಾಲಕಿಯನ್ನು ಪುಸಲಾಯಿಸಿ ತನ್ನ ಜಮೀನಿಗೆ ಕರೆದುಕೊಂಡು ಹೋಗಿದ್ದನಂತೆ. ಅಲ್ಲಿ ಬಟ್ಟೆಯಿಂದ ಬಾಯಿ ಮೂಗು ಒತ್ತಿ ಹಿಡಿದು ಪ್ರಜ್ಞೆ ತಪ್ಪಿಸಿದ್ದಾನೆ. ನಂತರ ಕೈಕಾಲು ಕಟ್ಟಿ ಗೋಣಿ ಚೀಲದಲ್ಲಿ ಹಾಕಿದ್ದಾನೆ. ಜಮೀನಿನ ಪಕ್ಕದ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಬಿದಿರು ಬಡಿಗೆಯಿಂದ ಅಪ್ರಾಪ್ತೆಯ ತಲೆಗೆ ಹೊಡೆದಿದ್ದಾನೆ.

ಸಂಗನಗೌಡ ಬಾಬುಗೌಡ ಬಿರಾದಾರ (24 ವ) ವಿಚಾರಣೆ ನಡೆಸಿದಾಗ ತಾನೇ ಹತ್ಯೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

RELATED TOPICS:
English summary :Vijayapura

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...