ಕೊರೊನಾ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು | ಜನತಾ ನ್ಯೂಸ್

17 Aug 2021
558

ಮಂಗಳೂರು : ಮಂಗಳೂರಿನಲ್ಲಿ ಕೊರೊನಾ ಮತ್ತು ಬ್ಲ್ಯಾಕ್ ಫಂಗಸ್‌ಗೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಗಳೂರು ಹೊರವಲಯದ ಚಿತ್ರಾಪುರದ ರಹೆಜಾ ಅಪಾರ್ಟ್​ಮೆಂಟ್​ನಲ್ಲಿ ರಮೇಶ್ ಕುಮಾರ್ ಮತ್ತು ಗುಣ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಂಪತಿ ಆತ್ಮಹತ್ಯೆಗೆ ಮುನ್ನ ಮಂಗಳೂರು ಪೊಲೀಸ್ ಆಯುಕ್ತರಿಗೆ ಫೋನ್ ಕರೆ ಮಾಡಿದ್ದರು. ಪತ್ನಿ ಗುಣ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾನೂ ಕೂಡಾ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ರಮೇಶ್ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್​ಗೆ ಇಂದು ಬೆಳಗ್ಗೆ ಕರೆ ಮಾಡಿದ್ದರು.

ಬಳಿಕ ಲೊಕೇಷನ್ ಟ್ರೇಸ್ ಮಾಡಿ ಪೊಲೀಸ್ ಆಯುಕ್ತರು ಸಿಬ್ಬಂದಿಯನ್ನು ಕಳುಹಿಸಿದ್ದರು. ಲಾಕ್ ಆಗಿದ್ದ ಫ್ಲ್ಯಾಟ್ ಬಾಗಿಲು ಒಡೆದು ಸಿಬ್ಬಂದಿ ಒಳಗೆ ಹೋದರು, ಅಷ್ಟರಲ್ಲೇ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದರು. ಒಂದು ವಾರದಿಂದ ರಮೇಶ್ ದಂಪತಿ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದರು ಎನ್ನಲಾಗಿತ್ತು.

ಪೋಸ್ಟ್ ಮಾರ್ಟಮ್‌ಗೂ ಮುನ್ನ ನಡೆಸಿದ ಮೃತದೇಹದ ಕೋವಿಡ್ ಟೆಸ್ಟ್ ನಲ್ಲಿ ರಿಪೋರ್ಟ್ ನೆಗೆಟಿವ್‌ ಬಂದಿದೆ. ರಿಪೋರ್ಟ್ ನೆಗೆಟಿವ್ ಬೆನ್ನಲ್ಲೇ ಮೃತದೇಹದ ಪೋಸ್ಟ್ ಮಾರ್ಟಮ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ರಮೇಶ್ ಪತ್ನಿ ಗುಣ ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದರು. ಡೆತ್ ನೋಟ್ ನಲ್ಲಿ ಕೊರೊನಾ ಲಕ್ಷಣಗಳು ಕಾಣುತ್ತಿರುವ ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ. ಈಗ ನನ್ನ ಪತಿಗೂ ಕೊರೊನಾ ಗುಣಲಕ್ಷಣ ಕಾಣಿಸಿಕೊಳ್ಳುತ್ತಿದೆ. ಬ್ಲ್ಯಾಕ್ ಫಂಗಸ್ ನಿಂದ ಕಣ್ಣು ಮತ್ತು ಇತರ ಭಾಗಗಳನ್ನು ಕಳೆದುಕೊಂಡಿದ್ದನ್ನು ನೋಡಿದಾಗ, ನಮ್ಮ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ನೋಡಿದಾಗ ನಮಗೂ ಭಯ ಕಾಡುತ್ತಿದೆ. ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ ಎಂದು ಮರಣ ಪತ್ರದಲ್ಲಿ ಉಲ್ಲೇಖಿಸಿದ್ದರು. ಇದಲ್ಲದೆ ಗುಣವತಿ ಅವರಿಗೆ ಇತರ ಆರೋಗ್ಯ ಸಮಸ್ಯೆಯೂ ಇರುವುದನ್ನು ಬರೆದುಕೊಂಡ ದಂಪತಿಗೆ ಮಕ್ಕಳಿಲ್ಲ ಕೊರಗು ಕೂಡಾ ಕಾಡಿತ್ತು ಎಂದು ಹೇಳಲಾಗಿದೆ.

ಪೊಲೀಸ್ ಆಯುಕ್ತ ಮತ್ತು ಹಿಂದೂ ಸಂಘಟನೆ ಮುಖಂಡರಿಗೆ ತಮ್ಮ ಅಂತ್ಯಕ್ರಿಯೆಗೆ 1 ಲಕ್ಷ ರೂ. ಹಣ ಇಟ್ಟಿರುವುದಾಗಿ ವಾಯ್ಸ್ ಮೆಸೇಜ್ ಮಾಡಿದ್ದಾರೆ. ಅಲ್ಲದೇ ಮನೆಯಲ್ಲಿರುವ ವಸ್ತು ಮಾರಿ ಬರುವ ಹಣವನ್ನು ಬಡವರಿಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಸದ್ಯ ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

RELATED TOPICS:
English summary :Mangalore

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...