ನನ್ನ ಹೋರಾಟ ಅಕ್ರಮ ಗಣಿಗಾರಿಕೆ ವಿರುದ್ಧ ಮಾತ್ರ. ಸಕ್ರಮವಾಗಿ ಇರುವ ಗಣಿಗಾರಿಕೆಗೆ ನನ್ನ ತಕರಾರು ಇಲ್ಲ | ಜನತಾ ನ್ಯೂಸ್

18 Aug 2021
468

ಮಂಡ್ಯ : ಸುಮಲತಾ ಅವರ ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಮಾತು ಆರಂಭಿಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ, ಕೆಆರ್‍ಎಸ್ ಬಳಿ ಸಭೆ ಕರೆದಿರುವ ಸಂಬಂಧ ಹಾಗೂ ತಮ್ಮ ಆಪ್ತ ಕಾರ್ಯದರ್ಶಿ ಲೆಟರ್‍ಹೆಡ್ ದುರ್ಬಳಕೆ ಮಾಡಿಕೊಂಡಿರುವ ಕುರಿತು ಸ್ಪಷ್ಟನೆ ನೀಡಿ ನಂತರ, ಸಭೆ ನಡೆಸಿ ಎಂದು ಸಂಸದೆ ಸುಮಲತಾ ಅವರನ್ನು ಒತ್ತಾಯಿಸಿದರು.

ಕೆಆರ್‍ಎಸ್ ಅಧಿಕಾರಿಗಳ ಸಭೆ ಕರೆಯುವ ಅಧಿಕಾರ ಸಂಸದರಿಗಿಲ್ಲ. ಆದರೆ, ತಾವು ತಮ್ಮ ವ್ಯಾಪ್ತಿ ಮೀರಿ ಸಭೆ ಕರೆದಿದ್ದೀರಿ. ಅದೂ ಅಲ್ಲದೆ, ನಿಮ್ಮ ಆಪ್ತ ಕಾರ್ಯದರ್ಶಿ ನಿಮ್ಮ ಲೆಟರ್‍ಹೆಡ್‍ನಲ್ಲಿ ಸಭೆ ಕರೆಯಲು ಕಾವೇರಿ ಪ್ರಾಧಿಕಾರದ ಅಧ್ಯಕ್ಷರಿಗೆ ಕೋರಿದ್ದಾರೆ. ನಿಮ್ಮ ಲೆಟರ್‍ಹೆಡ್ ದುರ್ಬಳಕೆ ಆಗುತ್ತಿದೆ ಎಂದು ರವೀಂದ್ರ ಆರೋಪಿಸಿದರು.

ಅಕ್ರಮ ಗಣಿಗಾರಿಕೆ ಬಗ್ಗೆ ಮಾತನಾಡುತ್ತೀರಿ. ಅದರೆ, ನಿಮ್ಮ ಸುತ್ತಮುತ್ತ ಅಕ್ರಮ ವ್ಯಕ್ತಿಗಳೇ ತುಂಬಿದ್ದಾರೆ. ನಿಮ್ಮ ಲೆಟರ್‍ಹೆಡ್ ದುರ್ಬಳಕೆ ಆಗುತ್ತಿದೆ. ಇದಕ್ಕೆ ಉತ್ತರ ಕೊಡಬೇಕು. ಜತೆಗೆ ಜಿಲ್ಲೆಯಲ್ಲಿ ನೀವು ಯಾವ ಅಭಿವೃದ್ಧಿ ಕೆಲಸ ಮಾಡಿದ್ದೀರಿ ಎಂಬುದನ್ನು ತಿಳಿಸಬೇಕು ಎಂದು ರವೀಂದ್ರ ಅವರು ಪಟ್ಟುಹಿಡಿದರು. ಇದಕ್ಕೆ ಸುರೇಶ್‍ಗೌಡ ಸೇರಿದಂತೆ ಜೆಡಿಎಸ್ ಶಾಸಕರು ದನಿಗೂಡಿಸಿದರು.

ಕೋವಿಡ್ ವಿಷಯದಲ್ಲಿ ಆಕ್ಸಿಜನ್ ಸಿಲಿಂಡರ್ ಕೊಡುಗೆ ಬಿಟ್ಟರೆ ನಿಮ್ಮಿಂದ ಬೇರೆ ಯಾವ ನೆರವು ಬಂದಿಲ್ಲ. ಎರಡೂವರೆ ವರ್ಷದಲ್ಲಿ ಒಂದು ಸಣ್ಣ ಮೋರಿ ಕಾಮಗಾರಿಯನ್ನು ಮಾಡಿಸಿಲ್ಲ. ಕೇವಲ ಪ್ರಚಾರ ಮಾಡುತ್ತಾ ಜನರನ್ನು ದಿಕ್ಕುತಪ್ಪಿಸುತ್ತೀದ್ದೀರಿ ಎಂದು ಅವರು ಟೀಕಸಿದರು.

ಸಂಸದೆಯಾಗಿ ಸಭೆಯನ್ನು ನಡೆಸುತ್ತಿದ್ದೇನೆ. ನಿಮ್ಮ ಪ್ರಶ್ನೆಗೆ ಉತ್ತರ ಕೊಡುವ ಅಗತ್ಯವಿಲ್ಲ. ನೀವು ಬೇಕಾದರೆ ಸಂಬಂಧಿಸಿದವರನ್ನು ಕೇಳಿ ಸ್ಪಷ್ಟನೆ ಪಡೆದುಕೊಳ್ಳಿ. ಇದು ರಾಜಕೀಯ ಸಭೆ ಅಲ್ಲ. ಲೆಟರ್‍ಹೆಡ್ ದುರ್ಬಳಕೆಯಾಗಿದ್ದರೆ ದೂರ ಕೊಡಿ. ಸುಮ್ಮನೆ ಸಭೆಗೆ ಅಡ್ಡಪಡಿಸುವುದು ಸರಿಯಲ್ಲ ಎಂದು ಸಂಸದೆ ಸುಮಲತಾ ಎದುರೇಟು ನೀಡಿದರು.

ಸುಮಲತಾ ಅಂಬರೀಶ್, ಸಭೆಯಲ್ಲಿ ಗಂಭೀರವಾದ ವಿಷಯದ ಬಗ್ಗೆ ಚರ್ಚೆ ಆಗುತ್ತಿದೆ. ಕೆಲವೊಂದು ಹೇಳಿಕೆಗಳಿಂದ ಪರ್ಸನಲ್ ಆಗುವುದು ಬೇಡ. ನನ್ನ ಹೋರಾಟ ಅಕ್ರಮ ಗಣಿಗಾರಿಕೆ ವಿರುದ್ಧ ಮಾತ್ರ. ಸಕ್ರಮವಾಗಿ ಇರುವ ಗಣಿಗಾರಿಕೆಗೆ ನನ್ನ ತಕರಾರು ಇಲ್ಲ. ಸಕ್ರಮವಾಗಿ ಇರುವ ಗಣಿಗಾರಿಕೆ ನಡೆದುಕೊಂಡು ಹೋಗಲಿ. ಸಕ್ರಮವಾಗಿ ಇರುವುದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಕ್ರಮ ಗಣಿಗಾರಿಕೆ ಮಾಡುವವರ ವಿರುದ್ಧ ಕ್ರಮ ಜರುಗಿಸಿಲ್ಲ. ಯಾರೊಬ್ಬರನ್ನೂ ಜೈಲಿಗೆ ಕಳುಹಿಸುವ ಕೆಲಸವಾಗಿಲ್ಲ ಎಂದು ಗಣಿ ಅಧಿಕಾರಿ ಪದ್ಮಜ ವಿರುದ್ಧ ಸಂಸದೆ ಸುಮಲತಾ, ಶಾಸಕರು ಗರಂ ಆಗಿದ್ದಾರೆ. ಅಕ್ರಮ ಗಣಿಗಾರಿಕೆಯ ವಿರುದ್ಧ ಏನು ಕ್ರಮ ಆಗಿದೆ. ಯಾವುದೇ ಸಭೆಯಲ್ಲೂ ಈ ಬಗ್ಗೆ ಮಾಹಿತಿ ನೀಡಿಲ್ಲ. ಸರಿಯಾದ ಮಾಹಿತಿ ತೆಗೆದುಕೊಂಡು ಏಕೆ ಸಭೆಗೆ ಬರಲ್ಲ ಎಂದು ಅಧಿಕಾರಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಗರಂ ಆಗಿದ್ದಾರೆ.

ಒಂದು ಸಾವಿರ ರೂಪಾಯಿ ಎಲೆಕ್ಟ್ರಿಕ್ ಬಿಲ್ ಕಟ್ಟಿಲ್ಲ ಅಂದರೆ ಬಿಡಲ್ಲ. ಗಣಿಯಲ್ಲಿ ನೂರಾರು ಕೋಟಿ ಕಟ್ಟಿಲ್ಲ ಎಂದರೆ ಏಕೆ ಬಿಡ್ತೀರಿ? ಸರ್ಕಾರದ ಹಣವನ್ನು ನೀವು ಏಕೆ ವಸೂಲಿ‌ ಮಾಡುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿಶಾ ಸಭೆಗೆ ಸಂಸದರು ಅಧ್ಯಕ್ಷರಾಗಿರುತ್ತಾರೆ. ಸಂಸದರು ಸಭೆ ಕರೆಯುವಂತೆ ಕೇಳಿದಾಗ ನಾನು ಸಭೆ ಕರೆದಿದ್ದೇನೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನೆಗೆ ಕೇಂದ್ರ ಸೂಚಿಸಿದೆ. ಹೀಗಾಗಿ ಸಭೆ ಕರೆದಿದ್ದೇನೆ ಎಂದು ಸಿಇಓ ದಿವ್ಯಪ್ರಭು ಸ್ಪಷ್ಟಪಡಿಸಿದರು.

ಸಂಸದೆ ಸುಮಲತಾ ಅವರು ಅಕ್ರಮ ಗಣಿಗಾರಿಕೆ ವಿರುದ್ಧ ಧನಿ ಎತ್ತಿದ ಹಿನ್ನೆಲೆಯಲ್ಲಿ ಅಕ್ರಮ ಸೇರಿದಂತೆ ಸಕ್ರಮ ಗಣಿಗಾರಿಕೆಯನ್ನೂ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪದ್ಮಜಾ ಸ್ಥಗಿತಗೊಳಿಸಿದ್ದಾರೆ. ಇದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ತೊಂದರೆಯಾಗಿದೆ ಎಂದು ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸಿ.ಎಸ್.ಪುಟ್ಟರಾಜು, ಕೆ.ಸುರೇಶ್‍ಗೌಡ ಕಿಡಿಕಾರಿದರು.

ಶಾಸಕ ಎಂ.ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಎನ್.ಅಪ್ಪಾಜಿಗೌಡ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

RELATED TOPICS:
English summary :Sumalatha Ambarish

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...