ಪತ್ನಿ ಬಡಿದು ಕೊಂದು, ಮೆಟ್ಟಿಲಿಂದ ಬಿದ್ದಳೆಂದು ಆಸ್ಪತ್ರೆಗೆ ಸೇರಿಸಿದ ಪತಿ! | ಜನತಾ ನ್ಯೂಸ್

18 Aug 2021
575

ಮಂಗಳೂರು : ಹೆಂಡತಿಯನ್ನು ಬಡಿದು ತಾನೇ ಕೊಲೆಗೈದು, ಬಳಿಕ ಆಕೆ ಮೆಟ್ಟಿಲಿನಿಂದ ಜಾರಿ ಬಿದ್ದು ಗಾಯಗೊಂಡಿದ್ದಾಳೆ ಎಂದು ಕಥೆ ಕಟ್ಟಿ ಆಸ್ಪತ್ರೆಗೆ ಸೇರಿಸಿದ ಪ್ರಕರಣ ಜಿಲ್ಲೆಯ ಮೂಡಬಿದ್ರೆಯ ಧರೆಗುಡ್ಡೆಯಲ್ಲಿ ಬೆಳಕಿಗೆ ಬಂದಿದೆ.

ಮೂಡಬಿದಿರೆ ತಾಲೂಕಿನ ಧರೆಗುಡ್ಡೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಠ ನಿವಾಸಿ ದಿನರಾಜ್ ಹೆಂಡತಿಯನ್ನು ಕೊಲೆಗೈದ ಪತಿ ಮಹಾಶಯ. ದಿನರಾಜ್‌ ಮತ್ತು ಸುನೀತಾ ಎಂಬುವವರಿಗೆ ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದೆ.

ಮೂಡಬಿದಿರೆಯಲ್ಲಿ ಬ್ಯಾಟರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ದಿನರಾಜ್ ಕೂಡಾ ಮದುವೆಯಾಗಿ ಆರು ತಿಂಗಳ ತನಕ ಹೆಂಡತಿಯ ಜೊತೆಗೆ ಖುಷಿಯಲ್ಲೇ ಇದ್ದ. ಆದರೆ ಆನಂತರ ವಾರದಲ್ಲೊಮ್ಮೆ ತೆಗೆದುಕೊಳ್ಳುತ್ತಿದ್ದ ಮದ್ಯವನ್ನು ಪ್ರತಿದಿನ ತೆಗೆದುಕೊಳ್ಳಲು ಆರಂಭಿಸಿದ್ದಾನೆ.

ಹೆಂಡತಿಯ ಬಗ್ಗೆ ಸದಾ ಅನುಮಾನ ವ್ಯಕ್ತಪಡಿಸುತ್ತಿದ್ದ ದಿನರಾಜ್, ಕಂಠ ಪೂರ್ತಿ ಕುಡಿದು ಬಂದು ಹಲ್ಲೆ ಮಾಡುತ್ತಿದ್ದ. ಇತ್ತ ಕುಡುಕ ಗಂಡನ ಕಾಟ ತಡೆಯಲಾರದೆ ಸುನೀತಾ ತವರು ಮನೆಯಲ್ಲಿ ದೂರು ನೀಡಿದರೂ, ಹಿರಿಯರೆಲ್ಲಾ ಮಾತುಕತೆ ನಡೆಸಿ ಗಂಡ-ಹೆಂಡತಿಯ ಅಸಮಾಧಾನಗಳನ್ನು ದೂರ ಮಾಡಿದ್ದರು.

ಮತ್ತೆ ಮದ್ಯದ ದಾಸನಾದ ದಿನರಾಜ್ ಪ್ರತಿದಿನ ಕುಡಿದು ಮನೆಗೆ ಬಂದು ಹೆಂಡತಿ ಸುನೀತಾ ಜೊತೆ ಗಲಾಟೆ ಆರಂಭಿಸಿದ್ದಾನೆ. ಆಗಸ್ಟ್ 17ರ ಸಂಜೆ 6 ಗಂಟೆಗೇನೇ ಕುಡಿದು ಬಂದು ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದಂತೆಯೇ ಹೆಂಡತಿಯೂ ಗಲಾಟೆ ಆರಂಭಿಸಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಮಾತು ಮಿತಿ ಮೀರಿ ಹೊಡೆದಾಟ ವಾಗಿದೆ.

ಈ ಸಂದರ್ಭದಲ್ಲಿ ದಿನರಾಜ್ ಮದ್ಯದ ಅಮಲಿನಲ್ಲಿ ಕೈಗೆ ಸಿಕ್ಕ ಬಲವಾದ ವಸ್ತುವಿನಲ್ಲಿ ಹೆಂಡತಿಯ ತಲೆಗೆ ಹೊಡೆದಿದ್ದಾನೆ. ಹೆಂಡತಿ ಸುನೀತಾ ರಕ್ತದ ಮಡುವಿನಲ್ಲಿ‌ ಬಿದ್ದಿದ್ದರಿಂದ ಭಯಗೊಂಡ ದಿನರಾಜ್ ಪಕ್ಕದ ಮನೆಯವರಿಗೆ ಕರೆ ಮಾಡಿ ಹೆಂಡತಿ ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದಿದ್ದಾಳೆ ಎಂದು ಕಥೆ ಕಟ್ಟಿದ್ದಾನೆ.

ಈತ ತನ್ನ ಹೆಂಡತಿ ಸುನಿತಾಳನ್ನು ನಿನ್ನೆ ಮೂಡಬಿದ್ರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತನ್ನ ಹೆಂಡತಿ ಮನೆಯ ಮೆಟ್ಟಲಿನಿಂದ ಜಾರಿ ಬಿದ್ದು ಗಾಯಗೊಂಡಿದ್ದಾಳೆ ಎಂದು ಹೇಳಿದ್ದ. ಅಲ್ಲಿ ಪರೀಕ್ಷಿಸಿದ ವೈದ್ಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಖಾಸಗಿ ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಸುನಿತಾ ಸಾವನ್ನಪ್ಪಿದ್ದು, ಮೃತದೇಹವನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಸುನಿತಾ ಮನೆಯವರು ಆಕೆಯ ಸಾವಿನ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪತಿ ದಿನರಾಜ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹಾರೆಯಿಂದ ಆಕೆಗೆ ಹೊಡೆದು, ಬಳಿಕ ಸುಳ್ಳು ಹೇಳಿ ಆಸ್ಪತ್ರೆಗೆ ಕರೆದುಕೊಂಡು ಬಂದಿರುವುದು ತಿಳಿದುಬಂದಿದೆ.

RELATED TOPICS:
English summary :Mangalore

ಉರಿ ಬಳಿ 3 ಭಯೋತ್ಪಾದಕರ ನಿರ್ಮೂಲನೆ ಮಾಡಿ, ಶಸ್ತ್ರಾಸ್ತ್ರ ವಶಕ್ಕೆ ಪಡೆದ ಭಾರತೀಯ ಪಡೆ | ಜನತಾ ನ್ಯೂ&#
ಉರಿ ಬಳಿ 3 ಭಯೋತ್ಪಾದಕರ ನಿರ್ಮೂಲನೆ ಮಾಡಿ, ಶಸ್ತ್ರಾಸ್ತ್ರ ವಶಕ್ಕೆ ಪಡೆದ ಭಾರತೀಯ ಪಡೆ | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ನ್ಯೂಸ್ MORE NEWS...