ಡಿಸೆಂಬರ್​ ಅಧಿವೇಶನ ಸುವರ್ಣಸೌಧದಲ್ಲಿ ನಡೆಸುವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್

21 Aug 2021
445

ಬೆಂಗಳೂರು : ಡಿಸೆಂಬರ್​ನಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಸುವೆ ಎಂದು ಬೆಳಗಾವಿ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸುವರ್ಣಸೌಧಕ್ಕೆ ಸಕ್ಕರೆ ಆಯುಕ್ತಾಲಯ ವರ್ಗಾಯಿಸುವೆ. ಸುವರ್ಣಸೌಧ ಸಮರ್ಪಕವಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದೇವೆ. ಪೂರ್ಣ ಪ್ರಮಾಣದಲ್ಲಿ ಇಲಾಖೆ ವರ್ಗಾವಣೆಗೆ ಆದೇಶಿಸುವೆ. ಬೆಂಗಳೂರಿಗೆ ತೆರಳಿದ ನಂತರ ಆದೇಶ ಹೊರಡಿಸುವೆ. ಇದರ ಜೊತೆಗೆ ಮತ್ತಷ್ಟು ಇಲಾಖೆ ವರ್ಗಾವಣೆ ಆದೇಶಿಸುವೆ ಎಂದು ಬೆಳಗಾವಿ ಸುವರ್ಣ ಸೌಧದಲ್ಲಿ ನೆರೆ ಹಾಗೂ ಕೊವಿಡ್19 ಪರಿಸ್ಥಿತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ನೆರೆ, ಕೊರೊನಾ ನಿರ್ವಹಣೆ ಬಗ್ಗೆ ಸಭೆ ನಡೆಸಿದ್ದೇನೆ. 2ನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್, ಬೆಡ್​ಗೆ ಬೇಡಿಕೆಯಿತ್ತು. ಕೊರೊನಾ 3ನೇ ಅಲೆ ಸಾಧ್ಯತೆ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸಲು ಹೇಳಿದ್ದೇನೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ಸಾಕಷ್ಟು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಸ್ವತಃ ನಾನೇ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದರಿಂದ ಪಾಸಿಟಿವಿಟಿ ರೇಟ್​ ಇಳಿಕೆಯಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ 1 ಕೋಟಿ 36 ಲಕ್ಷ ವೆಚ್ಚದಲ್ಲಿ ಆರ್‌ಟಿಪಿಸಿಆರ್ ಟೆಸ್ಟಿಂಗ್ ಲ್ಯಾಬ್ ನಿರ್ಮಾಣವಾಗಲಿದೆ. ಇನ್ಮುಂದೆ ಟೆಸ್ಟಿಂಗ್ ಸಾಮರ್ಥ್ಯ ಹೆಚ್ಚಿಸಲಾಗುತ್ತೆ. ಗೋಕಾಕ್‌ನಲ್ಲಿಯೂ ಆರ್‌ಟಿಪಿಸಿಆರ್ ಟೆಸ್ಟಿಂಗ್ ಸೆಂಟರ್ ಸ್ಥಾಪನೆಗೆ ಬೇಡಿಕೆ ಇದೆ. ಐದು ಹೊಸ ತಾಲೂಕು ಕೇಂದ್ರಗಳಲ್ಲಿ ಆಸ್ಪತ್ರೆ ಮೇಲ್ದರ್ಜೆಗೆ ಕ್ರಮ ಕೈಗೊಳ್ಳಲಾಗಿದೆ.

ಬೆಳಗಾವಿ ದೊಡ್ಡ ಜಿಲ್ಲೆ ನಿತ್ಯ 25 ಸಾವಿರ ವ್ಯಾಕ್ಸಿನೇಷನ್‌ ಮಾಡ್ತಿದಾರೆ. ಇನ್ನು 3 ದಿನಗಳಲ್ಲಿ ನಿತ್ಯ 40 ಸಾವಿರ ವ್ಯಾಕ್ಸಿನೇಷನ್‌ ಗೆ ಗುರಿ ಹೊಂದಲಾಗಿದೆ. ರಾಜ್ಯಕ್ಕೆ 63 ಲಕ್ಷ ಕೋವಿಡ್ ಲಸಿಕೆ ಬರುತ್ತಿದೆ. ಹೆಚ್ಚಿಗೆ ವ್ಯಾಕ್ಸಿನ್ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡುತ್ತೇನೆ ಎಂದರು.

ಬೆಳಗಾವಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ವ್ಯಾಕ್ಸಿನೇಷನ್‌ ಆಗಿದೆ. ಗಡಿಗ್ರಾಮಗಳಲ್ಲಿ ಹೆಚ್ಚಿನ ಲಸಿಕೆ ಅಭಿಯಾನ ಮಾಡಲು ಸಲಹೆ ಕೊಟ್ಟಿದ್ದೇನೆ. 3ನೇ ಅಲೆ ತಡೆಗೆ ಮಕ್ಕಳ ತಜ್ಞರ ನೇತೃತ್ವದಲ್ಲಿ ಚಿಲ್ಡ್ರನ್ ಹೆಲ್ತ್ ಕ್ಯಾಂಪ್‌ಗೆ ಸೂಚನೆ ನೀಡಲಾಗಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇನ್ನು ನೆರೆಯಿಂದ ಹಾನಿಯಾದ ಬಗ್ಗೆ ಸಮೀಕ್ಷೆ ಮಾಡಲು ತಿಳಿಸಿದ್ದೇನೆ. ನೀರು ಇಳಿದ ಮೇಲೆ ಶೀಘ್ರದಲ್ಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಯಲಿದೆ.

ನೆರೆಯಿಂದ ಬೆಳೆ ಹಾನಿ ಸಂಬಂಧ ಸಮೀಕ್ಷೆಗೆ ಸೂಚಿಸಿದ್ದೇನೆ. ಮನೆ ಹಾನಿ ಬಗ್ಗೆಯೂ ಸಮೀಕ್ಷೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಗೊಂದಲ ಉಂಟಾಗದಂತೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದೇನೆ. ಫೋಟೋ, ಜಿಪಿಎಸ್​ ಮೂಲಕ ಸಮಸ್ಯೆ ಬಗೆಹರಿಸುತ್ತೇವೆ. ಅರ್ಜಿ ಹಾಕುವುದು ತಡವಾಗಿದ್ದರೆ ಕೂಡ ಮಾನವೀಯತೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಸುವರ್ಣಸೌಧದಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಡಿಸೆಂಬರ್ ನಲ್ಲಿ ಅಧಿವೇಶನ ನಡೆಸುತ್ತೇವೆ. ಬೆಂಗಳೂರು ವಿಧಾನಸೌಧ ರೀತಿ ಸುವರ್ಣಸೌಧ ಆಗಬೇಕೆಂಬ ಆಸೆ ಇದೆ ಎಂದರು. ಬೆಳಗಾವಿಗೆ ಶುಗರ್ ಕಮಿಷನರ್ ಕಚೇರಿ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುತ್ತೇವೆ. ಸುವರ್ಣಸೌಧಕ್ಕೆ ಇಲಾಖೆಗಳ ಕಚೇರಿ ಸ್ಥಳಾಂತರ ಬಗ್ಗೆ ಶೀಘ್ರ ತೀರ್ಮಾನ ಮಾಡಲಾಗುವುದು.

RELATED TOPICS:
English summary :Basavaraj bommai

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...