ಮೇಕೆದಾಟು, ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್​​ ಪಾದಯಾತ್ರೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ | ಜನತಾ ನ್ಯೂಸ್

22 Aug 2021
531

ಬೆಂಗಳೂರು : ಮೇಕೆದಾಟು ಹಾಗೂ ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್ ಪಾದಯಾತ್ರೆ ನಡೆಸಲಿದೆ ಎಂದು ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ನಗರದ ಶೇಷಾದ್ರಿಪುರಂನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನದಿ ಯೋಜನೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್ ಈ ನಿಟ್ಟಿನಲ್ಲಿ ಹೋರಾಟ ನಡೆಸಲಿದೆ. ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯದಾದ್ಯಂತ ಪಾದಯಾತ್ರೆ ನಡೆಸಲಾಗುವುದು ಎಂದು ಹೇಳಿದರು.

ಪಕ್ಷದ ಸ್ಥಳೀಯ ಮುಖಂಡರು ಒಂದೊಂದು ತಂಡವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಸಮಾವೇಶಗಳಲ್ಲಿ ನಾನು ಪಾಲ್ಗೊಳ್ಳುತ್ತೇನೆ.ಅಲ್ಲದೆ, ತಮಗೆಪಾದಯಾತ್ರೆ ಮಾಡಲು ಕಷ್ಟ.ಹಾಗಾಗಿ, ಸಾಂಕೇತಿಕವಾಗಿ ಹೋರಾಟಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.

ಹೋರಾಟಕ್ಕೆ ದಿನಾಂಕವನ್ನು ನಿಗದಿ ಮಾಡುತ್ತೇವೆ. ನಮ್ಮ ರಾಜ್ಯದ ಹಿತ ಕಾಪಾಡೋದಕ್ಕಾಗಿ ಈ ಹೋರಾಟ ಅನಿವಾರ್ಯವಾಗಿದೆ , ಪ್ರಾದೇಶಿಕ ಪಕ್ಷವಾಗಿ ನಮ್ಮ ರಾಜ್ಯದ ಹಿತಾಸಕ್ತಿಗೋಸ್ಕರ ಹೋರಾಟ ಮಾಡುತ್ತೇವೆ. ಕಾಂಗ್ರೆಸ್-ಬಿಜೆಪಿಗೆ ಹೋರಾಟ ಮಾಡಲು‌ ಕಷ್ಟ ಇದೆ. ಅವ್ರು ಹೋರಾಟ ಮಾಡಲು ‌ಆಗುವುದಿಲ್ಲ. ಎಲ್ಲರೂ ಸರ್ಕಾರ ಮಾತ್ರ ‌ಮಾಡಿದ್ದಾರೆ. ಅವರಿಂದ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ನಾವೇ ಹೋರಾಟ ಮಾಡುತ್ತೇವೆ. ಸಾಂಕೇತಿಕವಾಗಿ ನಾನು ಒಂದು ದಿನ ಹೋರಾಟದಲ್ಲಿ ಭಾಗವಹಿಸುತ್ತೇನೆ. ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಹೋರಾಟ ಮುಂದುವರೆಯುತ್ತದೆ ಎಂದರು.

ಜೆಡಿಎಸ್ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವವರಿಗೆ ಹೋರಾಟ ಮಾಡುವ ಮೂಲಕ ಜೆಡಿಎಸ್‍ನ್ನು ಅಕಾರಕ್ಕೆ ತರುವ ಸಂಕಲ್ಪವನ್ನು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆ ಹೋರಾಟದಲ್ಲಿ ನಾನು ಭಾಗಿಯಾಗುತ್ತೇನೆ. ಹೋರಾಟ ಮಾಡುವಾಗ ಸರ್ಕಾರದ ಮೇಲೆ ಆರೋಪ ಮಾಡುವುದಿಲ್ಲ. ನಾವು ಹೋರಾಟ ಮಾಡಿ ಪಕ್ಷ ಉಳಿಸಿ ಅಧಿಕಾರಕ್ಕೆ ತರಲು ತೀರ್ಮಾನ ಮಾಡಿದ್ದೀವಿ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ನಮಗೆ ಯಾರ ಮೇಲೂ ದ್ವೇಷವಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್​ ಬಿಜೆಪಿ ನೆಹರೂ-ವಾಜಪೇಯಿ ಹೆಸರಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ ಕುರಿತು ಮಾತನಾಡಿದ ಅವರು, ಹಾಗೆಲ್ಲಾ ಮಾತಾಡಬಾರದು. ಹಾಗೆ ಮಾತನಾಡುವುದರಿಂದ ಅವರುಗಳ ಪಕ್ಷದ ಇಮೇಜ್ ಬಿಲ್ಡ್ ಆಗುತ್ತದೆ ಎಂದು ಭಾವಿಸಿದ್ದರೆ ಭ್ರಮನಿರಸನ ಗ್ಯಾರಂಟಿ ಎಂದು ಎರಡು ರಾಷ್ಟ್ರೀಯ ಪಕ್ಷಕ್ಕೆ ಕಿವಿಮಾತು ಹೇಳಿದರು.

RELATED TOPICS:
English summary :H D Devegowda

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...