ಅಪ್ರಾಪ್ತೆಗೆ ಕಿರುಕುಳ ಆರೋಪ, ಯುವಕನ ಬಂಧನ! | ಜನತಾ ನ್ಯೂಸ್
ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಯುವಕನೋರ್ವ ಕಿರುಕುಳ ನೀಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರು ಹಾಡಹಗಲೇ ನಾಲ್ವರು ಪುಂಡರ ಜೊತೆ ಬಂದಿದ್ದ ಓರ್ವ ಯುವಕ 16 ವರ್ಷದ ಅಪ್ರಾಪ್ತೆಗೆ ಮುತ್ತಿಟ್ಟಿದ್ದಾನೆ. ಬೆಂಗಳೂರಿನ ದೊಡ್ಡಬಿದರುಕಲ್ಲು ಬಳಿ ಶನಿವಾರ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಅಪ್ರಾಪ್ತೆ ಕಿರುಚಾಡ್ತಿದ್ದಂತೆ ಯುವಕ ಮುತ್ತು ಕೊಟ್ಟು ಪರಾರಿಯಾಗಿದ್ದಾನೆ. ಮುತ್ತು ನೀಡಿದ್ದು ಅಲ್ಲದೇ ಸೋಮವಾರ ಒಬ್ಬಳೇ ಸಿಗು ಎಂದು ವಾರ್ನಿಂಗ್ ನೀಡಿದ್ದಾನೆ. ಈ ಎಲ್ಲ ಘಟನೆಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದೀಗ ಅಪ್ರಾಪ್ತೆಗೆ ಕಿರುಕುಳ ನೀಡಿದ್ದ ಯುವಕನನ್ನು ಬಂಧಿಸಲಾಗಿದೆ. ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನ ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿ ವಾಸಿಸುವ ಏರಿಯಾದಲ್ಲೇ ಇದ್ದ ಆಟೋ ಚಾಲಕನ ಸೆರೆಯಾಗಿದೆ.