Sat,Apr27,2024
ಕನ್ನಡ / English

SC, ST ನಕಲಿ ಪ್ರಮಾಣಪತ್ರ ಕೊಟ್ಟ ಅಧಿಕಾರಿಗಳ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ ಎಚ್ಚರಿಕೆ | ಜನತಾ ನ್ಯೂಸ್

30 Aug 2021
2290

ಬೆಂಗಳೂರು : ಎಸ್​ಸಿ, ಎಸ್​ಟಿ​ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ವಿಧಿಸಿದರು.

ವಿಧಾನಸೌಧದಲ್ಲಿ ದೌರ್ಜನ್ಯ ಪ್ರತಿಬಂಧಕ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಎಸ್​ಸಿ ಮತ್ತು ಎಸ್​ಟಿ ದೌರ್ಜನ್ಯ ಸಮಿತಿ ಸಭೆಯನ್ನು ಮೂರು ತಿಂಗಳಿಗೊಮ್ಮೆ ನಡೆಸಲು ನಿರ್ಧಾರ ಮಾಡಿದ್ದೇವೆ.

ಕೇಸ್ ಕೊಟ್ಟಾಗ ಅನಗತ್ಯವಾಗಿ ತಡ ಮಾಡುತ್ತಿರುವುದರ ಬಗ್ಗೆ ಸಭೆಯಲ್ಲಿ ತಿಳಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ರೀತಿ ಆಗದಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಸಂಬಂಧಿಸಿದ ಪ್ರಕರಣಗಳ ಸಾಕ್ಷಿದಾರರಿಗೆ ರಕ್ಷಣೆ ನೀಡುವ ಕೆಲಸ ಆಗಬೇಕು. 1.8 ಲಕ್ಷ ಪ್ರಕರಣಗಳನ್ನು ಪುನರ್ ಪರಿಶೀಲನೆ ಮಾಡಬೇಕು. ಎಸ್​ಸಿ, ಎಸ್​ಟಿ​ ಸಮುದಾಯಕ್ಕೆ ಸಂಬಂಧಿಸಿ ಮಂಜೂರಾದ ಬೋರ್ವೆಲ್ ಹಂಚಿಕೆ ತ್ವರಿತವಾಗಿ ಆಗಬೇಕು. ಈ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಕೆಲಸಗಳಿಗೆ ವರ್ಗಾಯಿಸುವಂತಿಲ್ಲ ಎಂದು ಸಹ ಅವರು ಸೂಚಿಸಿದರು.

ಸರ್ಕಾರದಿಂದ ಎಸ್​ಟಿ, ಎಸ್​ಸಿ ಸಮುದಾಯದ ಫಲಾನುಭವಿಗಳಿಗೆ ಬೋರ್ ವೆಲ್ ಮಂಜೂರು ಮಾಡಿದಾಗ ಅನಗತ್ಯವಾಗಿ ತೊಂದರೆ ಕೊಡಬಾರದು. ಕಾಲಮಿತಿಯಲ್ಲಿ ಬೋರ್​ವೆಲ್​​ ಹಾಕಿಕೊಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.ಎಸ್​ಸಿಪಿ ಮತ್ತು ಟಿಎಸ್​ಪಿ ಹಣ ಬೇರೆ ಸಮುದಾಯಕ್ಕೆ ಉಪಯೋಗಿಸುವಂತಿಲ್ಲ.

ಈ ಸಂಬಂಧ ಕಟ್ಟುನಿಟ್ಟಿನ‌ ಸೂಚನೆ ನೀಡಲಾಗಿದೆ. ಹಣವನ್ನು ಆಯಾ ಸಮುದಾಯಕ್ಕೆ ಮಾತ್ರ ಬಳಸಬೇಕು. ಅಗತ್ಯ ತಿದ್ದುಪಡಿ ತರಲು ಸಲಹೆ ನೀಡಿದ್ದಾಗಿ ಸಿಎಂ ಮಾಹಿತಿ ನೀಡಿದರು.

RELATED TOPICS:
English summary :Basavaraj bommai

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...