ಸಿಲೆಂಡರ್ ಗಳ ದರ ಮತ್ತೆ 25 ರೂಪಾಯಿ ಹೆಚ್ಚಳ! | ಜನತಾ ನ್ಯೂಸ್
ನವದೆಹಲಿ : ಪೆಟ್ರೋಲಿಯಂ ಕಂಪೆನಿಗಳು ಎಲ್ ಪಿಜಿ ಸಿಲೆಂಡರ್ ಗಳ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಿವೆ. ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂಪಾಯಿ 50 ಪೈಸೆಯಾಗಿದೆ. ಹೊಸ ದರ ಇಂದೇ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ ಸಬ್ಸಿಡಿ ರಹಿತ ಪ್ರತಿ ಎಲ್ ಪಿಜಿ ಸಿಲಿಂಡರ್ ಬೆಲೆ ಇದೀಗ 887 ರೂಪಾಯಿಗೆ ಏರಿಕೆಯಾದಂತಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ 14.2ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ ಈಗ 884.50 ರೂಪಾಯಿಗೆ ಹೆಚ್ಚಳವಾದಂತಾಗಿದೆ.
ಕಳೆದ ಒಂದು ತಿಂಗಳೊಳಗೆ ತೈಲ ಕಂಪನಿಗಳು ಸತತ ಎರಡನೇ ಬಾರಿಗೆ ಅಡುಗೆ ಅನಿಲ ಬೆಲೆಯನ್ನು ಹೆಚ್ಚಿಸಿದಂತಾಗಿದೆ. ಆಗಸ್ಟ್ 18ರಂದು ಎಲ್ ಪಿಜಿ ಪ್ರತಿ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಸೆಪ್ಟೆಂಬರ್ 1ರಂದು ಮತ್ತೆ 25 ರೂಪಾಯಿ ಏರಿಕೆ ಮಾಡಲಾಗಿದೆ.