ಯುವಕನಿಗೆ "ಮೂತ್ರ ನೆಕ್ಕಿಸಿದ್ದ" ಪಿಎಸ್​ಐಗೆ 14 ದಿನಗಳ ನ್ಯಾಯಾಂಗ ಬಂಧನ | ಜನತಾ ನ್ಯೂಸ್

02 Sep 2021
418

ಚಿಕ್ಕಮಗಳೂರು : ದಲಿತ ಯುವಕನೊಬ್ಬನಿಗೆ ಮೂತ್ರ ಕುಡಿಸಿದ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್​ ಠಾಣೆ ಪಿಎಸ್​ಐ ಅರ್ಜುನ್​ ಅವರನ್ನು ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 1ರಂದು ಬೆಂಗಳೂರಿನಲ್ಲಿ ಪಿ.ಎಸ್.ಐ. ಅರ್ಜುನ್ ನನ್ನ ಬಂಧಿಸಿದ ಸಿ.ಐ.ಡಿ. ಪೊಲೀಸರು ಇಂದು ಚಿಕ್ಕಮಗಳೂರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶೆ ಪುಷ್ಪಾಂಜಲಿ ಅವರು ಆರೋಪಿ ಅರ್ಜುನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಗೋಣಿಬೀಡು ಠಾಣೆಯಲ್ಲಿ ಪಿ.ಎಸ್.ಐ. ಆಗಿದ್ದ ಅರ್ಜುನ್ ಮೇ.10ರಂದು ಮಹಿಳೆಗೆ ಕರೆ ಮಾಡಿದ ವಿಚಾರ ಸಂಬಂಧ ಪುನೀತ್ ಎಂಬ ಯುವಕನನ್ನ ವಿಚಾರಣೆಗೆ ಕರೆತಂದಿದ್ದರು. ಈ ವೇಳೆ ನನಗೆ ಬಾಯಾರಿಕೆ ಎಂದು ನೀರು ಕೇಳಿದಾಗ ಮತ್ತೊಬ್ಬ ಆರೋಪಿಯ ಮೂತ್ರ ಕುಡಿಸಿ, ನೆಲಕ್ಕೆ ಬಿದ್ದ ಮೂತ್ರವನ್ನ ನೆಕ್ಕಿಸಿದ್ದರು ಎಂದು ಪುನೀತ್ ಆರೋಪಿಸಿದ್ದರು.

ಘಟನೆ ಸಂಬಂಧ ಪಿಎಸ್‌ಐ ವಿರುದ್ಧ ಆರೋಪ ಮಾಡಿದ ಯುವಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದ. ಬಳಿಕ ಅರ್ಜುನ್ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಕೇಸ್ ದಾಖಲಾಗಿ, ಸರ್ಕಾರ ಅರ್ಜುನ್ ರನ್ನ ಅಮಾನತು ಮಾಡಿ ಪ್ರಕರಣವನ್ನ ಸಿಐಡಿಗೆ ವಹಿಸಿತ್ತು.

ಬಂಧನಕ್ಕೊಳಗಾಗುವ ಆತಂಕದಿಂದ ಪಿಎಸ್​ಐ ಅರ್ಜುನ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಕೂಡ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಸೆಪ್ಟೆಂಬರ್ 1ರ ಬುಧವಾರ ರಾತ್ರಿ ಸಿಐಡಿ ಪೊಲೀಸರು ಅರ್ಜುನ್ ರನ್ನ ಬೆಂಗಳೂರಿನಲ್ಲಿ ಬಂಧಿಸಿದ್ದರು.

RELATED TOPICS:
English summary :Chikkamagaluru

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...