ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ ಮರುನಾಮಕರಣ ಮಾಡಿ:ಪ್ರತಾಪ್ ಸಿಂಹ | ಜನತಾ ನ್ಯೂಸ್
ಮೈಸೂರು : ನಾಗರಹೊಳೆಯ "ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ" ಎಂಬ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ ಎಂಬ ಹೆಸರು ಬದಲಾವಣೆ ಮಾಡಿ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ನಾಗರಹೊಳೆ ರಾಷ್ಟ್ರೀಯ ಉದ್ಯಾನ & ಹುಲಿ ಸಂರಕ್ಷಿತ ಪ್ರದೇಶ ಎಂದು ನಾಮಕರಣ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ನಿನ್ನೆಯಷ್ಟೆ ಹಿಮಾಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಕ್ಯಾಬಿನೆಟ್ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು (ಅಸ್ಸಾಂ ರಾಜ್ಯದಲ್ಲಿರುವ) ಒರಾಂಗ್ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ. ಈ ಬೆಳವಣೆಗೆಯ ಬೆನ್ನಲ್ಲೆ ಕರ್ನಾಟಕದಲ್ಲಿರುವ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ (ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ) ಮರುನಾಮಕರಣದ ಕೂಗು ಕೇಳಿ ಬಂದಿದೆ.
Requesting the Hon. @CMofKarnataka Bommai Sir, to rename Rajiv Gandhi Nagarahole National Park & Tiger Reserve as FM K.M.Cariappa Nagarahole National Park & Tiger Reserve lies in the jurisdiction of Mysuru & Kodagu District. pic.twitter.com/qROeAIkAzx
— Pratap Simha (@mepratap) September 2, 2021