ಜಿಂಕೆಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಸೆರೆಹಿಡಿದ ಅರಣ್ಯ ಸಿಬ್ಬಂದಿ! | ಜನತಾ ನ್ಯೂಸ್
ಮಂಡ್ಯ : ಮಳವಳಿ ತಾಲ್ಲೂಕಿನ ಬಸವನಬೆಟ್ಟದ ಅರಣ್ಯದಲ್ಲಿ ಬೆಳಗಿನ ಜಾವ ಜಿಂಕೆ ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿ ನಾಲ್ವರನ್ನು ಬಂಧಿಸಿದ್ದಾರೆ.
ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆಗಳ ಬೇಟೆಯಾಡುತ್ತಿದ್ದ ದುಷ್ಕರ್ಮಿಗಳ ಗುಂಪಿನ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಭೇಟೆಗಾರನನೊಬ್ಬನಿಗೆ ಗುಂಡು ತಗುಲಿ ಗಾಯಗೊಂಡಿದ್ದು, ಇನ್ನುಳಿದ ಆರೋಪಿಗಳು ಪರಾರಿಯಾಗಿರುವ ಘಟನೆ ಮಂಡ್ಯ ಮಳವಳ್ಳಿ ತಾಲೂಕಿನ ಬಸವನಬೆಟ್ಟ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಬಸವನಬೆಟ್ಟ ಅರಣ್ಯ ಪ್ರದೇಶದಲ್ಲಿನ ಮುಖ್ಯ ರಸ್ತೆಬದಿಯಲ್ಲಿ ಈ ದುಷ್ಕರ್ಮಿಗಳು ಅಡಗಿ ಕುಳಿತು ರಸ್ತೆ ದಾಟುವ ಜಿಂಕೆ ಸೇರಿದಂತೆ ಇನ್ನಿತರ ಪ್ರಾಣಿಗಳ ಮೇಲೆ ಗುಂಡು ಹಾರಿಸಿ ಪ್ರಾಣಿಗಳ ಭೇಟಿಯಾಡುತ್ತಿದ್ದರು ಎನ್ನಲಾಗಿದೆ.
ನಾಲ್ವರು ಕಾಡುಗಳ್ಳರು ಬಂದೂಕಿನಿಂದ 2 ಜಿಂಕೆಗಳನ್ನು ಕೊಂದು ಹೆಗಲ ಮೇಲೆ ಹೊತ್ತಿಕೊಂಡು ಬರುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ವನಪಾಲಕರಿಗೆ ಈ ಕಳ್ಳರ ಗ್ಯಾಂಗ್ ಸಿಕ್ಕಿ ಬಿದ್ದಿದೆ. ತಕ್ಷಣ ಎಚ್ಚೆತ್ತ ವನಪಾಲಕರು ಅವರನ್ನು ಹಿಡಿಯಲು ಮುಂದಾಗಿದ್ದಾರೆ.
ಈ ಪರಿಣಾಮ ಕಾಡುಗಳ್ಳರು ಇವರಿಂದ ತಪ್ಪಿಸಿಕೊಳ್ಳಲು ಮುಂದಾದಗ ವೆಂಕಟೇಶ್ ಎನ್ನುವವರ ಮೇಲೆ ಫೈರಿಂಗ್ ಮಾಡಲಾಗಿದೆ. ಗುಂಡೇಟು ಬಿದ್ದ ವೆಂಕಟೇಶ್ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ, ಉಳಿದ ಮೂವರು ಪರಾರಿಯಾಗಿದ್ದು ಇವರೂ ಗೊಲ್ಲರದೊಡ್ಡಿ ಗ್ರಾಮದವರು ಎನ್ನಲಾಗಿದೆ.
ಆರೋಪಿಗಳು ಕೊಂದು ಹಾಕಿದ್ದ ಎರಡು ಜಿಂಕೆಯ ಶವಗಳನ್ನು ವಶಪಡಿಸಿಕೊಂಡಿರುವ ಅರಣ್ಯ ಸಿಬ್ಬಂದಿ, ಪರಾರಿಯಾಗಿರುವ ಆರೋಪಿಗಳ ಶೋಧಕಾರ್ಯ ಕೈಗೊಂಡಿದ್ದಾರೆ.