ಏನೇ ಆದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ: ಈಶ್ವರಪ್ಪ | ಜನತಾ ನ್ಯೂಸ್
ಶಿವಮೊಗ್ಗ : ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಕರ್ನಾಟಕದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎಸ್. ಈಶ್ವರಪ್ಪ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯದ ಮುಂದಿನ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.
ಅಮಿತ್ ಶಾ ಯಾವ ಅರ್ಥದಲ್ಲಿ ಅಮಿತ್ ಶಾ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೋ ನಮಗೆ ಗೊತ್ತಿಲ್ಲ. ಆದರೆ, ಸಾಮೂಹಿಕ ನಾಯಕತ್ವದ ಬಗ್ಗೆ ರಾಜ್ಯ ನಾಯಕರ ಒಲವು ಇದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸಾಮೂಹಿಕ ನಾಯಕತ್ವದಲ್ಲಿ ಬೊಮ್ಮಾಯಿಯವರ ಪಾತ್ರವೂ ಇರುತ್ತದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಂಘಟನೆ ಕಟ್ಟುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದೇವೆ. ಏನೇ ಆದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ ಎಂದರು.
ಕರ್ನಾಟಕದಲ್ಲಿ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.