ಯಾವುದೇ ಪ್ರತ್ಯೇಕ ಧರ್ಮದ ಬಗ್ಗೆ ನಾನು ಮಾತನಾಡಿಲ್ಲ: ಮಾಜಿ ಸಚಿವ ಎಂ.ಬಿ.ಪಾಟೀಲ್ | ಜನತಾ ನ್ಯೂಸ್

03 Sep 2021
471

ಬೆಂಗಳೂರು : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ನಿಲ್ಲಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಎಂ.ಪಿ.ಪಾಟೀಲ್ ಇದೀಗ ಉಲ್ಟಾ ಹೊಡೆದಿದ್ದಾರೆ. ಎಲ್ಲ ಉಪ ಪಂಗಡ ಸೇರಿ ಮಾನ್ಯತೆ ಕೇಳಿದ್ದೆವು ಸಿಗಲಿಲ್ಲ. ಈಗ ಪ್ರತ್ಯೇಕ ಧರ್ಮದ ಹೋರಾಟವಿಲ್ಲ ಎಂದು ಎಂ.ಬಿ.ಪಾಟೀಲ್ ಹೇಳಿದರು.

2023ರ ಚುನಾವಣೆ ಬಳಿಕ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಬಗ್ಗೆ ಒಟ್ಟಿಗೆ ಕೂತು ಚರ್ಚೆ ಮಾಡಿ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ. ಲಿಂಗಾಯತ ಮತಕ್ಕೆ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಎಲ್ಲಾ ಒಳ ಪಂಗಡಗಳಿಗೂ ಮೀಸಲಾತಿ ಸಿಗುತ್ತದೆ.

ಹಿಂದೆ ಹೋರಾಟ ಮಾಡಿದ್ದಾಗ ಸಮಯ ಬಹಳ ಕಡಿಮೆ ಇತ್ತು. ಗಡಿಬಿಡಿ ಆಯಿತು, ಲೋಪ ಆಯಿತು. ಈಗ ವೀರಶೈವ ಲಿಂಗಾಯತರೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯುತ್ತೇವೆ. ಬಹಳ ಮುಕ್ತ ಮನಸ್ಸಿನಿಂದ ಪ್ರತಿಷ್ಠ ಇಲ್ಲದೇ ಎಲ್ಲರೂ ಒಟ್ಟಿಗೆ ಕೂತು ಮುನ್ನಡೆಯುತ್ತೇವೆ. ವೀರಶೈವ ಲಿಂಗಾಯತ ಬೇರೆ, ಬಸವತತ್ವ ಲಿಂಗಾಯತ ಬೇರೆ ಹೋರಾಟ ಇರುವುದಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಹೋರಾಡುತ್ತೇವೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಬಳಿಕ ಪಂಚಪೀಠಗಳು, ವಿರಕ್ತಮಠಗಳು ವೀರಶೈವ ಮಹಾಸಭಾ, ಲಿಂಗಾಯಿತ ಜಾಗತಿಕ ಮಹಾಸಭಾ ಹಾಗೂ ಎಲ್ಲಾ ಪಕ್ಷಗಳ ರಾಜಕೀಯ ಪಕ್ಷಗಳ ಮುಖಂಡರು, ಧುರೀಣರನ್ನು ಸೇರಿಸಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ನಮ್ಮಲ್ಲಿ ಸಾಕಷ್ಟು ತಾತ್ವಿಕ ಭಿನ್ನಾಭಿಪ್ರಾಯಗಳಿವೆ. ಅವು ಏಕಾಏಕಿ ಇತ್ಯರ್ಥವಾಗುವುದಿಲ್ಲ.

ಒಂದರಿಂದ ಮೂರ್ನಾಲ್ಕು ವರ್ಷಗಳ ಕಾಲ ಬೇಕಾಗಬಹುದು. ಈ ಮೊದಲು ವೀರಶೈವ ಲಿಂಗಾಯಿತ ಧರ್ಮಕ್ಕೆ ಮಾನ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಾಗ ಒಂದು ಪದದ ಬಳಕೆಯಿಂದ ತಾಂತ್ರಿಕ ಸಮಸ್ಯೆ ಎದುರಾಗಿ ತಿರಸ್ಕಾರವಾಗಿತ್ತು. ಹಾಗಾಗಿ ನಾವು ಲಿಂಗಾಯಿತ ಧರ್ಮದ ಮಾನ್ಯತೆಗಾಗಿ ಹೋರಾಟ ರೂಪಿಸಿದ್ದೆವು. ಅದರಲ್ಲಿ ಯಾರನ್ನೂ ಏರ್ಪಡಿಸುವ ಉದ್ದೇಶ ಇರಲಿಲ್ಲ. ಮುಂದಿನ ದಿನಗಳಲ್ಲೂ ಕೂಡ ಯಾರನ್ನೂ ಬೇರ್ಪಡಿಸುವ ಉದ್ದೇಶ ಇಲ್ಲ. ನಾವೆಲ್ಲ ಒಟ್ಟಾಗಿ ಮುಂದಡಿ ಇಡುತ್ತೇವೆ ಎಂದರೆ ಯಾರಿಗಾದರೂ ತೊಂದರೆ ಇದೆಯೇ? ಇದರಲ್ಲಿ ಭಿನ್ನಮತದ ಧ್ವನಿ ಏಕೆ ಎಂದು ಪ್ರಶ್ನಿಸಿದರು.

ಮುಂದೆಯೂ ಆಗುವುದಿಲ್ಲ. ನನ್ನ ಹೇಳಿಕೆಗಳು ಪಕ್ಷದ ಹೇಳಿಕೆಗಳಲ್ಲ. ಕಾಂಗ್ರೆಸ್‍ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಸಮುದಾಯದ ಹಿತಾಸಕ್ತಿಯಿಂದ ಸ್ವಚ್ಛ , ಮುಕ್ತ ಹಾಗೂ ಶಾಂತಿಯುತ ಮನಸ್ಸಿನಿಂದ ಮುಂದಿನ ದಿನಗಳಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಗತ್ಯಬಿದ್ದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಸಿದ್ಧ. ಬಾಂಧವ್ಯದ ಬೆಸುಗೆ ಮೂಲಕ ಸಮುದಾಯಕ್ಕೆ ಅನುಕೂಲ ಮಾಡಿಕೊಡುವುದು ನಮ್ಮ ಉದ್ದೇಶ ಎಂದು ಹೇಳಿದರು.

ಈ ಹಿಂದೆ ತಾವು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಒಂದು ವೇಳೆ, ವೀರಶೈವ ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕಿದರೆ, ಎಲ್ಲರಿಗೂ ಒಳ್ಳೆಯದಾಗುತ್ತಿತ್ತು. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆ ಬಳಿಕ ಎಲ್ಲ ವೀರಶೈವ ಪ್ರತ್ಯೇಕ ಧರ್ಮಕ್ಕಾಗಿ ಚರ್ಚೆ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಎಲ್ಲರೂ ಸಾಮೂಹಿಕವಾಗಿ ಮುನ್ನುಗೋಣ ಎಂದು ತಾವು ಹೇಳಿರುವುದಾಗಿ ತಿಳಿಸಿದ್ದಾರೆ…

RELATED TOPICS:
English summary :M B patil

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ನ್ಯೂಸ್ MORE NEWS...