ಪೊಲೀಸ್ ಮಾಹಿತಿದಾರನೇ ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿದ್ದ ಡೀಲರ್! | ಜನತಾ ನ್ಯೂಸ್

04 Sep 2021
536

ಬೆಂಗಳೂರು : ಹಲವು ವರ್ಷಗಳಿಂದ ಪೊಲೀಸ್​​ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ ವ್ಯಕ್ತಿಯ ನಿಜ ಬಣ್ಣ ಕೊನೆಗೂ ಬಯಲಾಗಿದೆ. ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರೋಪದಡಿ ಈತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಏರ್​​​ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು ವಶಕ್ಕೆ ಪಡೆದುಕೊಳ್ಳಲಾಗಿದೆ.

ರಾಜಸ್ಥಾನ ಮೂಲದ ರತನ್​ಲಾಲ್​ನನ್ನು 5 ದಿನಗಳ ಕಾಲ ವಶಕ್ಕೆ ಪಡೆದಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯು ಹಲವು ವರ್ಷಗಳಿಂದ ಖುದ್ದು ಡ್ರಗ್ಸ್​ ದಂಧೆ ನಡೆಸುತ್ತಿದ್ದ. ಡ್ರಗ್ಸ್​ನಿಂದಲೇ ಹಣ ಸಂಪಾದನೆಗೆ ಇಳಿದಿದ್ದ. ತನ್ನ ಡ್ರಗ್ಸ್​ ಮಾಫಿಯಾಗೆ ಪೊಲೀಸರನ್ನೇ ಗಾಳ ಮಾಡಿಕೊಂಡಿದ್ದ ರತನ್​ ಲಾಲ್​, ತನ್ನ ಮೇಲೆ ಅನುಮಾನ ಬಾರದಿರಲೆಂದು ಪೊಲೀಸರಿಗೆ ಮಾಹಿತಿದಾರನಾಗಿ ಕೆಲಸ ಮಾಡಿಕೊಂಡಿದ್ದ.

ಗಾಂಜಾ, ಆಫೀಮನ್ನು ಆಂಧ್ರ ಪ್ರದೇಶದ ವೈಜಾಗ್​ನಲ್ಲಿ ಖರೀದಿಸುತ್ತಿದ್ದ. ಸಾಮಾನ್ಯವಾಗಿ ಆಂಧ್ರದ ಗುಡ್ಡಗಾಡು ಪ್ರದೇಶಗಳಲ್ಲಿ ನಕ್ಸಲರು ಗಾಂಜಾ ಬೆಳೆಯುವ ಶಂಕೆ ವ್ಯಕ್ತವಾಗಿದೆ. ರತನ್​ ಸಹ ಆಂಧ್ರದಲ್ಲಿರುವ ನಕ್ಸಲ್​ ಸಂಪರ್ಕಿತರಿಂದ ಗಾಂಜಾ ಖರೀದಿಸುತ್ತಿದ್ದ ಎಂಬ ಅನುಮಾನ ವ್ಯಕ್ತವಾಗಿದೆ. ನಾನ್​ ಸಿಂಥಟಿಕ್​ ಡ್ರಗ್ಸ್​ನ್ನು ರಾಜಾಸ್ಥಾನ ಮೂಲದ ಪೆಡ್ಲರ್​ಗಳಿಂದ ಖರೀದಿಸುತ್ತಿದ್ದ.

ಪ್ರತಿಷ್ಠಿತ ಉದ್ಯಮಿಗಳಿಗೆ ಗಾಂಜಾ, ಆಫೀಮು, ಎಂಡಿಎಂಎ, ಎಕ್ಸ್​ಟಿಸಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಸದ್ಯ ಈತ ಯಾರಿಗೆಲ್ಲಾ ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಲ್ಲದೆ ಆಂಧ್ರದ ನಕ್ಸಲರ ಜೊತೆ ನಂಟಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವಿಶಾಖಪಟ್ಟಣ ಮತ್ತು ಒಡಿಶಾ ಗಡಿಭಾಗಗಳಲ್ಲಿರುವ ನಕ್ಸಲ್ ಜೊತೆ ನಂಟು ಹೊಂದಿರುವ ಆರೋಪ ಕೇಳಿಬಂದಿದೆ. ಮತ್ತೊಂದು ಕಡೆ ಈತನ ಜೊತೆ ಕೆಲ ಪೊಲೀಸರು ಕೂಡ ಶಾಮೀಲಾಗಿರುವ ಶಂಕೆ ಹಿನ್ನೆಲೆಯಿದ್ದು, ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ‌.

RELATED TOPICS:
English summary :Bangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...