Fri,Mar29,2024
ಕನ್ನಡ / English

ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ ಕೋರ್ಸ್​ಗೆ ದಾಖಲಾದ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ : ಅಶ್ವತ್ಥ್ ನಾರಾಯಣ | ಜನತಾ ನ್ಯೂಸ್

04 Sep 2021
1870

ಬೆಂಗಳೂರು : ಪ್ರತಿಭೆಯಿಂದಲೇ ತನ್ನ ಮನೆ ಬಾಗಿಲಲ್ಲೆ ಪಾಲಿಟೆಕ್ನಿಕ್​ಗೆ ಪ್ರವೇಶ ಪಡೆದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಡುತಿನಿ ಗ್ರಾಮದ ಪ್ರತಿಭಾವಂತ ಬಡ ವಿದ್ಯಾರ್ಥಿ ಎಂ.ಮೌನೇಶ್‌ಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಭರವಸೆ ನೀಡಿದ್ದಾರೆ.

ಶನಿವಾರದಂದು ಸಚಿವರು ಮೌನೇಶ್ ಮತ್ತವರ ಪೋಷಕರಿಗೆ ಕರೆ ಮಾಡಿ ಮಾತನಾಡಿದ ಸಚಿವರು, ಹತ್ತನೇ ತರಗತಿಯಲ್ಲಿ ಶೇ.90ರಷ್ಟು ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಯನ್ನು ಶ್ಲಾಘಿಸಿದರು. ಮುಂದಿನ ಮೂರು ವರ್ಷಗಳ ವಿದ್ಯಾಭ್ಯಾಸವನ್ನು ಸರ್ಕಾರ ಸಂಪೂರ್ಣ ಉಚಿತವಾಗಿ ನೀಡಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ಮೌನೇಶ್ ಪೋಷಕರ ಜೊತೆಯೂ ಮಾತನಾಡಿದ ಸಚಿವರು, ನಿಮ್ಮ ಪುತ್ರನಿಗೆ ಉಚಿತ ಶಿಕ್ಷಣ ನೀಡಲಾಗುವುದು. ಯಾವುದೇ ಚಿಂತೆ ನಿಮಗೆ ಬೇಡ. ಎಲ್ಲವನ್ನೂ ಸರ್ಕಾರವೇ ನೋಡಿಕೊಳ್ಳಲಿದೆ. ತದ ನಂತರ ಉದ್ಯೋಗ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಬೇಕಾದರೂ ಸರ್ಕಾರ ಸಹಕಾರ ನೀಡುತ್ತದೆ ಎಂದು ಸಚಿವರು ಹೇಳಿದರು. ವಿದ್ಯಾರ್ಥಿ ಮೌನೇಶ್ ಹಾಗೂ ಅವರ ಪೋಷಕರು ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.

ವಿದ್ಯಾರ್ಥಿಯ ಮನೆ ಬಾಗಿಲಿಗೇ ತೆರಳಿ ಪ್ರವೇಶಾತಿ ನೀಡಿದ ಕೂಡ್ಲಿಗಿಯ ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು, ಬೋಧಕ ಸಿಬ್ಬಂದಿಯನ್ನು ಇದೇ ವೇಳೆ ಅಶ್ವಥ್ ನಾರಾಯಣ ಅವರು ಮನಸಾರೆ ಶ್ಲಾಘಿಸಿದರು.

RELATED TOPICS:
English summary :Ashwath Narayan

ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ನ್ಯೂಸ್ MORE NEWS...