ನಮ್ಮಲ್ಲಿ ಮಸೀದಿಯೊಳಗೆ ಗುಂಡು, ಬಾಂಬ್‌ ಗಳಿಂದ ಕೊಲ್ಲಲಾಗುವುದಿಲ್ಲ, ಭಾರತದ ಮುಸ್ಲಿಮರನ್ನು ಬಿಟ್ಟುಬಿಡಿ - ತಾಲಿಬಾನ್ ಗೆ ಸಚಿವ ನಕ್ವಿ ಮನವಿ | ಜನತಾ ನ್ಯೂಸ್

04 Sep 2021
403

ನವದೆಹಲಿ : ತಾಲಿಬಾನ್ ವಕ್ತಾರರು ತಮ್ಮ ಗುಂಪು ಕಾಶ್ಮೀರದ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ಹೊಂದಿದೆ, ಎಂದು ಹೇಳಿಕೊಂಡ ಕೆಲವು ಗಂಟೆಗಳ ಒಳಗೆ, ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಉಗ್ರರಿಗೆ, ಭಾರತದ ಮುಸ್ಲಿಮರನ್ನು "ಬಿಟ್ಟುಬಿಡಿ" ಎಂದು ಹೇಳಿದ್ದಾರೆ.

ಈ ದೇಶದಲ್ಲಿ ಧರ್ಮದ ಹೆಸರಿನಲ್ಲಿ ಯಾವುದೇ ಉಗ್ರ ದೌರ್ಜನ್ಯಗಳ ಉದಾಹರಣೆಗಳಿಲ್ಲ, ಎಂದು ಸ್ಪಷ್ಟವಾಗಿ ಹೇಳಿದ್ದಾರೆ. "ಈ ದೇಶದ ಸರ್ಕಾರಗಳ ಧರ್ಮಗ್ರಂಥವು ಸಂವಿಧಾನವಾಗಿದೆ ಮತ್ತು ದೇಶವು ಅದನ್ನು ಅನುಸರಿಸುತ್ತದೆ" ಎಂದು ನಖ್ವಿ ಹೇಳಿದರು.

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು ಭಾರತದಲ್ಲಿ ಅನುಸರಿಸುವ ಏಕೈಕ ಧರ್ಮಗ್ರಂಥವು ಸಂವಿಧಾನದ್ದಾಗಿದೆ. ಮತ್ತು ಇಲ್ಲಿನ ಮಸೀದಿಗಳಲ್ಲಿ ನಮಾಜ್ ಮಾಡುತ್ತಿರುವವರನ್ನು ಗುಂಡುಗಳು ಮತ್ತು ಬಾಂಬ್‌ಗಳಿಂದ ಕೊಲ್ಲಲಾಗುವುದಿಲ್ಲ, ಅಥವಾ ಹುಡುಗಿಯರು ಶಾಲೆಗೆ ಹೋಗುವುದನ್ನು ತಡೆಯುವುದಿಲ್ಲ, ಎಂದು ಎಎನ್‌ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಸಂದೇಶ ರವಾನಿಸಿದ್ದಾರೆ.

ಭಾರತ ಮತ್ತು ಅಫ್ಘಾನಿಸ್ತಾನದ ಆಡಳಿತದ ನಡುವೆ ಗಮನಾರ್ಹ ವ್ಯತ್ಯಾಸವಿದೆ ಮತ್ತು ಹೀಗಾಗಿ ಈ ದೇಶದಲ್ಲಿ ಮುಸ್ಲಿಮರ ಪರವಾಗಿ ಮಾತನಾಡುವುದಕ್ಕಿಂತ ತಾಲಿಬಾನ್ ಉತ್ತಮವಾಗಿ ತಮ್ಮ ಕಾರ್ಯನಿರ್ವಹಿಸಲಿ, ಎಂದು ನಖ್ವಿ ಸೂಚಿಸಿದರು.

"ನಾನು ಅವರಿಗೆ (ತಾಲಿಬಾನ್) ಕೈಮುಗಿದು ಮನವಿ ಮಾಡುತ್ತೇನೆ, ಭಾರತದ ಮುಸ್ಲಿಮರನ್ನು ಬಿಟ್ಟುಬಿಡಿ" ಎಂದು ಸಚಿವರು ಮನವಿ ಮಾಡಿದ್ದಾರೆ. "ಇಲ್ಲಿ ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವ ಭಕ್ತರ ಮೇಲೆ ಗುಂಡುಗಳು ಮತ್ತು ಬಾಂಬುಗಳಿಂದ ದಾಳಿ ನಡೆಸುವುದಿಲ್ಲ. ಇಲ್ಲಿ ಹುಡುಗಿಯರು ಶಾಲೆಗೆ ಹೋಗುವುದನ್ನು ತಡೆಯುವುದಿಲ್ಲ, ಅವರ ತಲೆ ಮತ್ತು ಕಾಲುಗಳನ್ನು ಕತ್ತರಿಸುವುದಿಲ್ಲ", ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, "ಕಾಶ್ಮೀರವು ನಮ್ಮ ನ್ಯಾಯವ್ಯಾಪ್ತಿಯ ಭಾಗವಲ್ಲ ಮತ್ತು ಹಸ್ತಕ್ಷೇಪವು ನಮ್ಮ ನೀತಿಗೆ ವಿರುದ್ಧವಾಗಿದೆ," ಎಂದು ಇನ್ನೊಬ್ಬ ತಾಲಿಬಾನ್ ಮುಖಂಡ ಅನಸ್ ಹಕ್ಕಾನಿ ಹೇಳಿದ್ದ ಹೇಳಿಕೆಗೆ ತದ್ವಿರುದ್ಧವಾಗಿ, ತಾಲಿಬಾನ್ ವಕ್ತಾರ ಸುಹೇಲ್ ಶಾಹೀನ್ ಈ ವಾರ ಬಿಬಿಸಿ ಉರ್ದುಗೆ ನೀಡಿದ ಸಂದರ್ಶನದಲ್ಲಿ, "ಮುಸ್ಲಿಮರಾಗಿ, ಕಾಶ್ಮೀರ, ಭಾರತ ಅಥವಾ ಬೇರೆ ಯಾವುದೇ ದೇಶದಲ್ಲಿ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ನಮಗೂ ಇದೆ" ಎಂದು ಹೇಳಿದ್ದರು.

RELATED TOPICS:
English summary :Spare Muslims in India - Union Min. Naqvi

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...