Fri,Apr26,2024
ಕನ್ನಡ / English

ವಿದ್ಯಾರ್ಥಿಗಳಿಗೆ ಸದೃಢ ಹಾಗೂ ಉತ್ತಮ ಶಿಕ್ಷಣ ನೀತಿ ಕೊಡಬೇಕು: ಡಾ.ಸಿ.ಎನ್.ಅಶ್ವತ್ಥನಾರಾಯಣ | ಜನತಾ ನ್ಯೂಸ್

05 Sep 2021
2416

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಪ್ರತಿಪಕ್ಷಗಳು ಮಾಡುತ್ತಿರುವ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಾರಾಸಗಟಾಗಿ ತಳ್ಳಿಹಾಕಿದಲ್ಲದೆ, ಇದು ಅರ್ಥರಹಿತ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿದ ಟೀಕೆ ಎಂದು ತಿರುಗೇಟು ನೀಡಿದ್ದಾರೆ.

ರವಿವಾರ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೊಸ ಶಿಕ್ಷಣ ನೀತಿಯನ್ನು ಕೆಲವರು ಆತುರಾತುರವಾಗಿ ಜಾರಿ ಮಾಡಲಾಗಿದೆ ಎಂದು ಹೇಳುತ್ತಿರುವ ಮಾತಿನಲ್ಲಿ ಲವಲೇಶವೂ ಸತ್ಯಾಂಶವಿಲ್ಲ. ದೇಶದ ಶ್ರೇಷ್ಟ ತಜ್ಞರು, ವಿದ್ವಾಂಸರು, ವಿವಿಧ ಕ್ಷೇತ್ರಗಳ ಸಾಧಕರು ಅವಿರತವಾಗಿ ಐದೂವರೆ ವರ್ಷ ಕಾಲ ಸಮಗ್ರ ಅಧ್ಯಯನ, ಮಾಹಿತಿ ಸಂಗ್ರಹ, ಚರ್ಚೆ, ಸಂವಾದ, ಟೀಕೆ-ಟಿಪ್ಪಣಿಗಳೆಲ್ಲವನ್ನೂ ಮಾಡಿಕೊಂಡು, ಐದೂವರೆ ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಪಡೆದು ರೂಪಿಸಿದ ನೀತಿ ಇದು ಎಂದು ಹೇಳಿದರು.

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿಧ್ಯುಕ್ತ ಜಾರಿಯು ಆ.23ರಂದು ಆಗಿದೆ ನಿಜ. ಆದರೆ, ಒಂದೇ ವರ್ಷದಲ್ಲಿ ಇಡೀ ನೀತಿಯನ್ನು ಜಾರಿ ಮಾಡಲು ಸಾಧ್ಯವಿಲ್ಲ. ಈ ನೀತಿಯನ್ನು ಹಂತ ಹಂತವಾಗಿ ಜಾರಿ ಮಾಡಲಾಗುತ್ತಿದ್ದು, ಒಟ್ಟಾರೆ ಜಾರಿಗೆ 15 ವರ್ಷಗಳ ಕಾಲಾವಕಾಶ ಇದೆ. ಆದರೆ, ರಾಜ್ಯ ಸರಕಾರ 10 ವರ್ಷಗಳಲ್ಲಿಯೇ ಪೂರ್ಣವಾಗಿ ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ. 2030ರ ಹೊತ್ತಿಗೆ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಆಮೂಲಾಗ್ರವಾಗಿ ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

ಎನ್​ಇಪಿ ಅಂದ್ರೆ ನಾಗ್ಪುರ್ ಶಿಕ್ಷಣ ನೀತಿ ಎಂದಿದ್ದ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್‌ ನಾರಾಯಣ ತಿರುಗೇಟು ನೀಡಿದ್ದಾರೆ. ಹೊಸ ಶಿಕ್ಷಣ ನೀತಿಯ (NEP) ಬಗ್ಗೆ ಗೊತ್ತಿಲ್ಲದಿದ್ರೆ ಬೇರೆಯವರ ಬಳಿ ಕೇಳಿ ತಿಳಿಯಲಿ. ಇಲ್ಲದಿದ್ರೆ ಪರಿಷತ್‌ನಲ್ಲಿ ನಾನೇ ಅವರಿಗೆ ತಿಳಿಸುತ್ತೇನೆ. ಡಿ.ಕೆ. ಶಿವಕುಮಾರ್‌ ಹೇಳಿಕೆ ಅವರಿಗೇ ತಿರುಗುಬಾಣವಾಗುತ್ತೆ. ಎಂದಿದ್ದಾರೆ.

ಭಾರತ ಅಭಿವೃದ್ಧಿ ದೇಶ ಆಗಬೇಕು, ಅಂದ್ರೆ ರಾಷ್ಟ್ರೀಯ ಶಿಕ್ಷಣ ನೀತಿ ಸಹಾಯ ಆಗುತ್ತೆ. ವಿದ್ಯಾರ್ಥಿಗಳಿಗೆ ಸದೃಢ ಹಾಗೂ ಉತ್ತಮ ಶಿಕ್ಷಣ ನೀತಿ ಕೊಡಬೇಕು. ವಿದ್ಯಾರ್ಥಿಗಳ ಸಬಲೀಕರಣ, ವಿದ್ಯಾರ್ಥಿಗಳ ಭವಿಷ್ಯ ಉತ್ತಮ ಆಗಬೇಕು ಎಂದು ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

"ಎನ್​ಇಪಿ ಅಂದ್ರೆ ನಾಗ್ಪುರ್ ಎಜುಕೇಷನ್ ಪಾಲಿಸಿ" ಎಂದು ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಡಿ.ಕೆ. ಶಿವಕುಮಾರ್​ ಆಕ್ಷೇಪ ವ್ಯಕ್ತಪಡಿಸಿದ್ದರು. ಕೇಂದ್ರ ಸರ್ಕಾರದ ಹೊಸ ಎನ್​ಇಪಿ ಸರಿಕಾಣುತ್ತಿಲ್ಲ. ನಾನು ಕೂಡ ಶಿಕ್ಷಣ ಸಂಸ್ಥೆ ನಡೆಸುತ್ತೇನೆ, ಟ್ರಸ್ಟಿಯಾಗಿದ್ದೇನೆ. ಆದರೂ ರಾಷ್ಟ್ರೀಯ ಶಿಕ್ಷಣ ನೀತಿ ಅರ್ಥೈಸಿಕೊಳ್ಳಲಾಗುತ್ತಿಲ್ಲ. ಎನ್​ಇಪಿ ಬಗ್ಗೆ ಸಂಸತ್, ವಿಧಾನಸಭೆಯಲ್ಲಿ ಚರ್ಚೆಯಾಗಿಲ್ಲ. ಯಾರ ಅನುಕೂಲಕ್ಕಾಗಿ ಎನ್​ಇಪಿ ಜಾರಿಗೆ ಹೊರಟಿದ್ದಾರೆ ಎಂದು ಪ್ರಶ್ನೆ ಮಾಡಿದ್ದರು.

ಎನ್​ಇಪಿ ಬಗ್ಗೆ ಶಿಕ್ಷಕರು, ಉಪನ್ಯಾಸಕರಿಗೆ ಮಾಹಿತಿಯಿಲ್ಲ. ಯಾರಿಗೂ ಮಾಹಿತಿ ನೀಡದೆ ಎನ್​ಇಪಿ ಜಾರಿಗೆ ತರಾತುರಿ ಮಾಡಲಾಗುತ್ತಿದೆ. ರಾಜ್ಯದ ಉನ್ನತ ಶಿಕ್ಷಣ ಸಚಿವರು ಆಸಕ್ತಿ ತೋರುತ್ತಿದ್ದಾರೆ. ಆದರೆ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಮ್ಮ ವಿರೋಧವಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಎನ್​ಇಪಿ ಜಾರಿಯಾಗಿಲ್ಲ. ಆದರೆ, ಕರ್ನಾಟಕದಲ್ಲಿ ಮಾತ್ರ ಎನ್​ಇಪಿ ಜಾರಿಗೆ ಒತ್ತಡ ಹೇರಲಾಗುತ್ತಿದೆ. ಹಿಂಬಾಗಿಲ ಮೂಲಕ ಹಿಂದಿ ಹೇರಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

RELATED TOPICS:
English summary :Ashwath Narayan

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...