ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದೊಂದು ಐತಿಹಾಸಿಕ ಗೆಲುವು: ಯಡಿಯೂರಪ್ಪ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶವು ತೃಪ್ತಿದಾಯಕವಾಗಿದ್ದು, ಮೊದಲ ಬಾರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿದ್ದು, ಇದೊಂದು ಐತಿಹಾಸಿಕ ಗೆಲುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸಂಸದರು, ಶಾಸಕರ ಹಾಗೂ ವಿಧಾನಪರಿಷತ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಪುನಃ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಜನಪರ ಯೋಜನೆಗಳು, ಸಾಧನೆಗಳು ಚುನಾವಣೆ ಮೇಲೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಈ ಫಲಿತಾಂಶ ನಿದರ್ಶನ ಎಂದು ಅವರು ಹೇಳಿದ್ದಾರೆ.
ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಅಭಿವೃದ್ಧಿಪರ ಆಡಳಿತ ನೀಡಲಿದೆ. ಈ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು, ಮತದಾರರು ಹಾಗೂ ಮುಖಂಡರಿಗೆ ಯಡಿಯೂರಪ್ಪ ಅಭಿನಂದನೆ ತಿಳಿಸಿದ್ದಾರೆ.