ಗಣಪತಿ ಹಬ್ಬಕ್ಕೆ ಬಿಬಿಎಂಪಿ ರೂಲ್ಸ್ ಬಿಡುಗಡೆ, ಗಣೇಶೋತ್ಸವಕ್ಕೆ 3 ದಿನ ಮಾತ್ರ ಅವಕಾಶ! | ಜನತಾ ನ್ಯೂಸ್

07 Sep 2021
381

ಬೆಂಗಳೂರು : ಬೆಂಗಳೂರು ನಗರದಲ್ಲಿ ಹಬ್ಬದ ಆಚರಣೆಯ ಮೇಲೆ ನಿಗಾವಹಿಸಲು ಮತ್ತು ಕೊರೊನಾ ನಿಯಮಗಳನ್ನು ಕಾಪಾಡಲು ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಬಿಬಿಎಂಪಿ ಪಾಲಿಸಬೇಕಾದ ಮಾರ್ಗಸೂಚಿ ಸುತ್ತೋಲೆ ಹೊರಡಿಸಿದೆ.

ಸಭೆಯ ನಂತರ ಮಾತನಾಡಿದ ಬಿಬಿಎಂಪಿ ಕಮೀಷನರ್ ಗೌರವ್ ಗುಪ್ತ ಪಾಲಿಕೆಯ ವಾರ್ಡ್ ಅಧಿಕಾರಿಗಳು ಸಾರ್ವಜನಿಕವಾಗಿ ಗಣಪತಿ ಇಡಲು ಅನುಮತಿ ಕುರಿತು ಮತ್ತು ಸ್ವಚ್ಚತೆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ. ಸಾರ್ವಜನಿಕವಾಗಿ ಮೂರು ದಿನ ಇಡಲು ಅವಕಾಶ ನೀಡಲಾಗಿದೆ. ಮೂರು ದಿನ ನಂತರ ಗಣೇಶ ವಿಸರ್ಜನೆ ಮಾಡಬೇಕು. ಮನೆಯಲ್ಲಿ ಇಡುವ ಮೂರ್ತಿಗಳನ್ನ ಮನೆಯಲ್ಲೆ ವಿಸರ್ಜನೆ ಮಾಡಬೇಕು. ಇಲ್ಲವೇ ಮೊಬೈಲ್ ಟ್ಯಾಂಕ್ ನಲ್ಲಿ ವಿಸರ್ಜನೆ ಮಾಡಬೇಕು ಎಂದಿದ್ದಾರೆ.

1. ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಎತ್ತರ, ಮನೆಯಲ್ಲಿ 2 ಅಡಿ ಎತ್ತರದ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ.

2. 198 ವಾರ್ಡ್​ಗಳಲ್ಲಿ ಒಂದು ಸಾರ್ವಜನಿಕ ಗಣೇಶ ಮೂರ್ತಿಗೆ ಅವಕಾಶ. ಆದರೆ, ಸ್ಥಳ ಪಾಲಿಕೆ ನಿಗದಿ ಮಾಡುತ್ತದೆ.

3. ಸೆ.8ರ ಒಳಗಾಗಿ ಜಾಗ ನಿಗದಿಪಡಿಸಿ ಅನುಮತಿ ಕೊಡುವ ವ್ಯವಸ್ಥೆ ಮಾಡಿಕೊಳ್ಳುವುದು.

4. ಟ್ರಾಫಿಕ್ ಸಮಸ್ಯೆ ಆಗದಂತೆ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಇದಕ್ಕೆ ಆಯಾ ವಾರ್ಡ್ ವ್ಯಾಪ್ತಿಯ ಸಂಚಾರಿ ಪೊಲೀಸರ ಉಸ್ತುವಾರಿ ಇರಲಿದೆ.

5. ಮೂರ್ತಿ ಪ್ರತಿಷ್ಠಾಪನೆ ಜಾಗದಲ್ಲಿ 20 ಮಂದಿಗೆ ಮಾತ್ರ ಅವಕಾಶ. ಇಲ್ಲಿ ಹೋಂಗಾರ್ಡ್ ಹಾಗೂ ಮಾರ್ಷಲ್ಸ್ ಉಸ್ತುವಾರಿ ಇರುತ್ತದೆ. ಸಾರ್ವಜನಿಕರು ನಿಯಮ ತಪ್ಪಿದರೆ ದಂಡ ವಿಧಿಸಲಾಗುವುದು.

6. ಸಾರ್ವಜನಿಕವಾಗಿ ಗಣಪತಿ ಸ್ಥಾಪನೆ ಮಾಡುತ್ತಿರುವ ಆಯೋಜಕರು ಲಸಿಕೆ ಪ್ರಮಾಣ ಪತ್ರ ಹಾಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು. ಅಲ್ಲದೇ ಆ ಸ್ಥಳದಲ್ಲಿ ಲಸಿಕೆ ಅಭಿಯಾನವನ್ನು ಆರೋಗ್ಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಹಮ್ಮಿಕೊಳ್ಳಬೇಕು.

7. ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಮಯದಲ್ಲಿ ಯಾವುದೇ ಕಾರಣಕ್ಕೂ ಹೆಚ್ಚು ಜನರು ಸೇರಬಾರದು, ಮೆರವಣಿಗೆ ನಡೆಸಲು ಅನುಮತಿ ಇಲ್ಲ.

8. ನಿಯಮ ಉಲ್ಲಂಘಿಸುವವರ ವಿರುದ್ಧ ಕಾಯ್ದೆ 2005 ಹಾಗು IPC 188 ಅಡಿಯಲ್ಲಿ ಕ್ರಮ ತೆಗದುಕೊಳ್ಳಲಾಗುವುದು.

RELATED TOPICS:
English summary :Ganesha Festival

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...