Sat,Apr27,2024
ಕನ್ನಡ / English

ಹಸುಗೂಸನ್ನು ಪೊದೆಗೆಸೆದು ಹೋದ ಕ್ರೂರಿಗಳು, ಮಗುವೇ ನೀಡಿತು ಎಸೆದು ಹೋದವರ ವಿಳಾಸ! | ಜನತಾ ನ್ಯೂಸ್

08 Sep 2021
2233

ಚಿಕ್ಕಮಗಳೂರು : ನವಜಾತ ಶಿಶುವನ್ನು ಕ್ರೂರಿಗಳು ಪೊದೆಗೆ ಎಸೆದು ಹೋದ ಮನಕಲುಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ನಡೆದಿದೆ.

ಪೊದೆಯೊಳಗಿನಿಂದ ಹಸುಗೂಸಿನ ಕೂಗು ಕೇಳಿದ ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬಿಳಗುಳ ವಾಸಿ ಚಂದ್ರು ಎನ್ನುವವರು ದಾರಿಯಲ್ಲಿ ನಡೆದುಕೊಂಡು ಹೋಗುವಾಗ ಪೊದೆಯೊಳಗಿನಿಂದ ಮಗು ಅಳುವ ಶಬ್ಧವನ್ನ ಕೇಳಿ ಮಗುವಿನ ರಕ್ಷಣೆ ಮಾಡಿದ್ದಾರೆ. ಮಗುವನ್ನ ಸುರಕ್ಷಿತವಾಗಿ ರಕ್ಷಣೆ ಮಾಡಿ, ಸಮೀಪದಲ್ಲಿರುವ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಮಗು ಯಾರದ್ದು ಅನ್ನೋದರ ಸುಳಿವನ್ನ ಸ್ವತಃ ಆ ಮಗುವೇ ನೀಡಿದೆ. ಹೌದು, ಮಗುವಿನ ಕೈಗೆ ಕಟ್ಟಿದ ಗುರುತಿನ ಚೀಟಿ ಹಾಗೆ ಇದ್ದು, ಅದರಲ್ಲಿ ಮಗುವಿನ ತಾಯಿ ಯಾರು, ತಂದೆ ಯಾರು.. ಎಲ್ಲಿಯವರು ಅನ್ನೋ ವಿಳಾಸ ಗೊತ್ತಾಗಿದೆ. ಮಗುವಿನ ಕೈಯಲ್ಲಿದ್ದ ಗುರುತಿನ ಚೀಟಿಯಿಂದ ಸುಲಭವಾಗಿ ಪೋಷಕರನ್ನ ಗುರುತಿಸಲು ಸಾಧ್ಯವಾಗಿದೆ.

ಮೂಡಿಗೆರೆ ತಾಲೂಕಿನ ಗ್ರಾಮವೊಂದರ 25 ವರ್ಷದ ವ್ಯಕ್ತಿಗೆ ಇಬ್ಬರು ಪತ್ನಿಯರಿದ್ದು, ಇಬ್ಬರಿಗೂ ಕೂಡ ಒಂದೊಂದು ಗಂಡು ಮಗು ಇದೆ. ಅಕ್ಕ-ತಂಗಿಯರನ್ನ ವರಿಸಿದ್ದ ಆತ, ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.

ಮೊದಲ ಪತ್ನಿಗೆ 3 ವರ್ಷದ ಗಂಡು ಮಗುವಿದ್ದು, ಎರಡನೇ ಪತ್ನಿಗೆ ಎರಡು ವರ್ಷದ ಗಂಡು ಮಗುವಿದೆ. ಇದೀಗ ಮತ್ತೆ ಎರಡನೇ ಪತ್ನಿ 12 ದಿನದ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ನಿನ್ನೆ ಆಸ್ಪತ್ರೆಗೆ ಮಗುವನ್ನ ಕರೆದುಕೊಂಡು ಬಂದಿದ್ದ ದಂಪತಿ, ಮಗುವನ್ನ ಬಿಳಗುಳ ಸಮೀಪದ ಪೊದೆಯೊಂದರಲ್ಲಿ ಬಿಸಾಕಿ ಊರಿಗೆ ಹೋಗಿದ್ದಾರೆ.

ಅಕ್ಕಪಕ್ಕದ ಮನೆಯವರಿಗೆ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿತು ಅಂತಾ ತಿಳಿಸಿದ್ದಾರೆ. ಸಂಜೆ ಮಗು ಸಿಕ್ಕ ಬಳಿಕ ವಿಚಾರಣೆ ಮಾಡಿದಾಗ, ಈಗಾಗಲೇ ಇಬ್ಬರು ಮಕ್ಕಳಿದ್ದು ಮಗು ಸಾಕಲು ಕಷ್ಟ ಆಗುತ್ತದೆ ಎಂದು ಎಸೆದು ಬಂದಿರುವುದಾಗಿ ಹೇಳಿಕೆ ನೀಡಿದ್ದಾರೆ.

RELATED TOPICS:
English summary :Chikkamagaluru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...