ಅಜ್ಜ-ಅಜ್ಜಿಯನ್ನು ನೋಡಲು ಬೆಂಗಳೂರಿಂದ ಕೊಡಗಿಗೆ ನಡೆದೇ ಹೊರಟ ಬಾಲಕಿ | ಜನತಾ ನ್ಯೂಸ್

08 Sep 2021
474

ಬೆಂಗಳೂರು : ಬನಶಂಕರಿ ಠಾಣೆ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ 15 ವರ್ಷದ ಬಾಲಕಿಯನ್ನು ಬರೋಬ್ಬರಿ 250 ಸಿಸಿ ಕ್ಯಾಮರಾ ಪರಿಶೀಲಿಸಿ ಪತ್ತೆ ಹಚ್ಚಿರುವ ಬನಶಂಕರಿ ಪೊಲೀಸರು ಕುಟುಂಬ ಸದಸ್ಯರಿಗೆ ಒಪ್ಪಿಸಿದ್ದಾರೆ.

ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಬಾಲಕಿ, ಕೊಡಗಿನಲ್ಲಿರುವ ಅಜ್ಜ-ಅಜ್ಜಿ ನೋಡಲೆಂದು ಬೆಂಗಳೂರಿನಿಂದ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ನಡಿಗೆ ಮೂಲಕ 30 ಕಿ.ಮೀ ಕ್ರಮಿಸಿ ತಾವರೆಕೆರೆ ಬಳಿ ಮಹಿಳೆಯೊಬ್ಬರ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಮನೆಗೆ ಹೋಗಿ ಬಾಲಕಿಯನ್ನು ಕರೆತರಲಾಗಿದೆ ಎಂದು ತಿಳಿದುಬಂದಿದೆ.

ತ್ಯಾಗರಾಜನಗರದ ನಿವಾಸಿ 15 ವರ್ಷದ ಬಾಲಕಿ ನಾಪತ್ತೆಯಾದವಳು. ಕೊಡಗಿನ ವಿರಾಜಪೇಟೆಯ ಅಯ್ಯಪ್ಪ ಕಳೆದ 9 ವರ್ಷಗಳಿಂದ ಬೆಂಗಳೂರಿನ ತ್ಯಾಗರಾಜನಗರದಲ್ಲಿ ವಾಸಿಸುತ್ತಿದ್ದಾರೆ. ಕೊಡಗಿನಲ್ಲಿರುವ ತಮ್ಮ ಮನೆಯಲ್ಲಿ ಕೆಲಸ ಮಾಡುವ ನೌಕರನ ಮೊಮ್ಮಗಳು 15 ವರ್ಷದ ಬಾಲಕಿಯನ್ನು ಓದಿಸಲು ಅಯ್ಯಪ್ಪ ಬೆಂಗಳೂರಿಗೆ ಕರೆ ತಂದಿದ್ದರು. ಬಾಲಕಿ ಯಡಿಯೂರಿನ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ.

ಆ.21ರಂದು ಮಧ್ಯಾಹ್ನ ಬಾಲಕಿ ಮನೆಯಿಂದ ಏಕಾಏಕಿ ಹೊರ ಹೋಗಿದ್ದಳು. ನಂತರ ಊರಿಗೂ ತೆರಳದೆ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದಳು. ಅಯ್ಯಪ್ಪ ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ನಾಪತ್ತೆಯಾದ ಬಾಲಕಿ ಪತ್ತೆ ಕಾರ್ಯದಲ್ಲಿ ತೊಡಗಿದ್ದರು.

ರಸ್ತೆಯಲ್ಲಿ ನಡೆದು ಸುಸ್ತಾಗಿದ್ದ ಬಾಲಕಿಯನ್ನು ಮಹಿಳೆಯೊಬ್ಬರು ಮಾತನಾಡಿಸಿದ್ದರು. ನನಗೆ ತಂದೆ-ತಾಯಿ ಇಲ್ಲ. ಕೊಡಗಿನಲ್ಲಿರುವ ಅಜ್ಜ- ಅಜ್ಜಿ ಮನೆಗೆ ಹೊರಟಿದ್ದೇನೆ ಎಂದಿದ್ದ ಬಾಲಕಿ, ಕೆಲದಿನ ಆಶ್ರಯ ನೀಡುವಂತೆ ಕೋರಿದ್ದಳು. ಅದಕ್ಕೆ ಒಪ್ಪಿದ್ದ ಮಹಿಳೆ, ಬಾಲಕಿಯನ್ನು ಕರೆದೊಯ್ದು ಮನೆಯಲ್ಲಿ ಇರಿಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಮನೆಗೆ ಹೋಗಿ ಬಾಲಕಿಯನ್ನು ಕರೆತರಲಾಗಿದೆ.

ಬಾಲಕಿಯನ್ನು ಈ ಬಗ್ಗೆ ವಿಚಾರಿಸಿದಾಗ, ಆಕೆ ತನ್ನ ಸ್ವಂತ ಊರಾದ ಕೊಡಗಿನಲ್ಲಿರುವ ಅಜ್ಜಿ-ತಾತನನ್ನು ಕಾಣುವ ಉದ್ದೇಶದಿಂದ ವಿರಾಜಪೇಟೆಗೆ ನಡೆದುಕೊಂಡು ಹೋಗಲು ನಿರ್ಧರಿಸಿರುವುದಾಗಿ ತಿಳಿಸಿದ್ದಾಳೆ.

RELATED TOPICS:
English summary :Bangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...