ಪಾಕಿಸ್ತಾನ ಅಫ್ಘಾನಿಸ್ತಾನದ ಮಣ್ಣನ್ನು ಭಯೋತ್ಪಾದನೆ ಹರಡಲು ಬಳಸಬಾರದು : ಭಾರತ ಮತ್ತು ರಷ್ಯಾ ಸಮಾಲೋಚನೆ | ಜನತಾ ನ್ಯೂಸ್

09 Sep 2021
445

ನವದೆಹಲಿ : ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಭಾರತ ಮತ್ತು ರಷ್ಯಾ ಇಂದು ಬುಧವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಮಾಲೋಚನೆ ನಡೆಸಿದೆ.

ಭಾರತೀಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಷ್ಯಾದ ಒಕ್ಕೂಟದ ಭದ್ರತಾ ಮಂಡಳಿಯ ಕಾರ್ಯದರ್ಶಿ ಜನರಲ್ ನಿಕೋಲಾಯ್ ಪತ್ರುಶೇವ್ ನೇತೃತ್ವದಲ್ಲಿ ಈ ಮಾತುಕತೆ ನಡೆಯಿತು. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದ ನಂತರ ಪತ್ರುಶೇವ್ ಯಾವುದೇ ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲು ಎಂಬುದು ವಿಶೇಷವಾಗಿದೆ.

ಪಾಕಿಸ್ತಾನವು ತಾಲಿಬಾನ್ ಜೊತೆ ಸಂಪರ್ಕ ಹೊಂದಿರುವುದರಿಂದ ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಲಷ್ಕರ್-ಇ-ತೊಯ್ಬಾ(ಎಲ್ಇಟಿ) ನಂತಹ ಅಂತರಾಷ್ಟ್ರೀಯ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ನೀಡುತ್ತಿರುವುದರಿಂದ ಇಸ್ಲಾಮಾಬಾದ್, ಅಫ್ಘಾನಿಸ್ತಾನದ ಮಣ್ಣನ್ನು ಭಯೋತ್ಪಾದನೆಯನ್ನು ಹರಡಲು ಬಳಸದೇ ಇರುವ "ವಿಶೇಷ ಜವಾಬ್ದಾರಿ"ಯನ್ನು ಹೊಂದಿದೆ, ಎಂದು ಭಾರತ ಸೂಚಿಸಿದೆ.

ಮಾತುಕತೆಯ ವೇಳೆ, ಅಫ್ಘಾನ್ ಅಲ್ಪಸಂಖ್ಯಾತರಾದ ಹಿಂದೂಗಳು ಮತ್ತು ಸಿಖ್ಖರ ಭದ್ರತೆಯ ಬಗ್ಗೆ ಭಾರತವು ಕಳವಳ ವ್ಯಕ್ತಪಡಿಸಿತು. ಆಗಸ್ಟ್ ನಲ್ಲಿ, ಭಾರತವು 500 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿತು, ಅದರಲ್ಲಿ 200ಕ್ಕೂ ಹೆಚ್ಚು ಜನರು ಅಫ್ಘಾನಿಸ್ತಾನರು, ಮುಖ್ಯವಾಗಿ ಅಲ್ಪಸಂಖ್ಯಾತರಾದ ಹಿಂದುಗಳು ಮತ್ತು ಸಿಖ್ಖರು ಸೇರಿದ್ದಾರೆ.

ಅಫ್ಘಾನಿಸ್ತಾನದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯ ಸಮಸ್ಯೆಯನ್ನು ಭಾರತ ಮತ್ತು ಮಧ್ಯ ಏಷ್ಯಾಕ್ಕೆ ಬೆದರಿಕೆಯಾಗಿ ಉಭಯ ಮುಖಂಡರು ಗಮನಿಸಿದ್ದಾರೆ. ಮೂರು ಮಧ್ಯ ಏಷ್ಯಾದ ರಾಜ್ಯಗಳಾದ ತುರ್ಕಮೆನಿಸ್ತಾನ್, ತಜಕಿಸ್ತಾನ ಮತ್ತು ಉಜ್ಬೇಕಿಸ್ತಾನ್ ಅಫ್ಘಾನಿಸ್ತಾನದೊಂದಿಗೆ ಅಫ್ಘಾನಿಸ್ತಾನ ಗಡಿಯನ್ನು ಹಂಚಿಕೊಳ್ಳುತ್ತವೆ ಮತ್ತು ಪ್ರಸ್ತುತ ಬಿಕ್ಕಟ್ಟು ಅವರ ಮೇಲೂ ಪರಿಣಾಮ ಬೀರಬಹುದಾಗಿದೆ. ಸೋವಿಯತ್ ಸಂಪರ್ಕದಿಂದಾಗಿ ರಷ್ಯಾವು ಪ್ರಮುಖ ಭದ್ರತೆ ಮತ್ತು ಆರ್ಥಿಕ ಪಾಲುದಾರನಾಗಿದ್ದು, ಈ ಮಧ್ಯ ಏಷ್ಯಾದ ದೇಶಗಳೊಂದಿಗೆ ಹೊಸ ದೆಹಲಿ ಮತ್ತು ಮಾಸ್ಕೋ ಎರಡೂ ನಿಕಟ ಸಂಬಂಧಗಳನ್ನು ಹಂಚಿಕೊಂಡಿವೆ.

RELATED TOPICS:
English summary :Pakistan should not use Afghanistan soil to spread terrorism : India & Russia inter-govt consultation

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...