ದೇವಸ್ಥಾನ ತೆರವಿಗೆ ತೀವ್ರ ವಿರೋಧ, ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ | ಜನತಾ ನ್ಯೂಸ್

12 Sep 2021
375

ಮೈಸೂರು : ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ದೇವಸ್ಥಾನವನ್ನು ಕೆಡವಿಹಾಕಿರುವ ವಿಚಾರದಲ್ಲಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಾಪ್ ಸಿಂಹ, "ಮೈಸೂರಿನಾದ್ಯಂತ 90ಕ್ಕಿಂತ ಹೆಚ್ಚು ದೇವಾಲಯಗಳಿವೆ. ಅವುಗಳನ್ನು ಕೆಡವುದರಿಂದ ಜನರ ಭಾವನೆಗೆ ಧಕ್ಕೆಯಾಗುತ್ತೆ. ನಾನು ಕೆಡಿಪಿ ಸಭೆಯಲ್ಲಿ ಇದನ್ನು ಚರ್ಚೆ ಮಾಡಿದ್ದೇನೆ. ನಮ್ಮ ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡ್ತಿರಾ?, ದರ್ಗಾ, ಚರ್ಚ್‌ಗಳು ಯಾಕೆ ತೆರವು ಮಾಡಿಲ್ಲ" ಎಂದು ಕಿಡಿಕಾರಿದರು.

ಮೈಸೂರಿನ 101 ಗಣಪತಿ ದೇವಾಲಯ ನಮ್ಮ ಪ್ರತೀಕ. ನಾವು ಯಾವುದೇ ವಾಹನ ಖರೀದಿ ಮಾಡಿದರು ಇಲ್ಲಿ ಪೂಜೆ ಮಾಡಿಸುತ್ತೇವೆ. ಇದಕ್ಕೆ ನೋಟಿಸ್ ಕೊಟ್ಟು ನೆಲಸಮ ಮಾಡುತ್ತೇವೆ ಅಂತಾ ಜಿಲ್ಲಾಡಳಿತ ಹೇಳಿದೆ. ಇದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ. ಅದಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಕಳ್ಳರಂತೆ ಬೆಳಗಿನ ಜಾವ ಬಂದು ದೇಗುಲ ಒಡೆಯುತ್ತಿದ್ದಾರೆ ಎಂದು ಹೇಳಿದರು.

ಮಸೀದಿ, ಚರ್ಚ್​ಗಳು ಇಲ್ವಾ? ಇದನ್ನು ಒಪ್ಪಲು ನಮಗೆ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ ಪ್ರತಾಪ್ ಸಿಂಹ, ಕೇವಲ ದೇವಾಲಯಗಳನ್ನು ಏಕೆ ಟಾರ್ಗೆಟ್ ಮಾಡ್ತಿದ್ದೀರಿ? ಮಸೀದಿ, ಚರ್ಚ್​ಗಳು ಇಲ್ವಾ ಎಂದು ಪ್ರಶ್ನಿಸಿದ್ದಾರೆ.

2009 ರಿಂದ ಇದುವರೆಗೂ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರ ಕಟ್ಟಲು ಅವಕಾಶ ಕೊಟ್ಟಿಲ್ವಾ? ಜಿಲ್ಲಾಡಳಿತ ಕ್ಯಾತಮಾರನಹಳ್ಳಿ ಅನಧಿಕೃತವಾಗಿ ಮಸೀದಿ ಬಂತು. ಯಾಕೆ ಜಿಲ್ಲಾಡಳಿತ ತಡೆಯಲಿಲ್ಲ? ಇದು ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಅಲ್ವಾ? 90 ದೇವಾಲಯ ಪಟ್ಟಿ ಮಾಡುವಾಗ ಕೋರ್ಟ್ ನಿರ್ದೇಶದಂತೆ ಜನರ ಅಭಿಪ್ರಾಯ ಕೇಳಿದ್ರಾ? ಎಂದು ಪ್ರಶ್ನಿಸಿದ ಸಂಸದ ಪ್ರತಾಪ್, ಜಿಲ್ಲಾಡಳಿತಕ್ಕೆ ನಾನು ದಬಾಯಿಸಿದೆ ಅಂತಾರೆ. ನನ್ನ ಧರ್ಮಕ್ಕೆ ಅನ್ಯಾಯವಾದಾಗ ಆಕ್ರೋಶ ಸಹಜ. ಧರ್ಮ ಪ್ರೀತಿಸುವ ಎಲ್ಲರಿಗೂ ಈ ಆಕ್ರೋಶ ಸಹಜ. ಸುಪ್ರೀಂಕೋರ್ಟ್ ಆದೇಶ ಅಂತಾ ಮೈಸೂರು ಜಿಲ್ಲಾಡಳಿತ ಜನರ ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.

"ಮಾತೆತ್ತಿದರೆ ಸುಪ್ರೀಂಕೋರ್ಟ್ ಆರ್ಡರ್ ಅಂತಾರೆ. ನಮ್ಮ ಹತ್ತಿರನೂ ಸುಪ್ರೀಂ ಕೋರ್ಟ್ ಆರ್ಡರ್ ಇದೆ. ಸುಪ್ರೀಂ ಕೋರ್ಟ್ 2009ರಲ್ಲಿ ಮಧ್ಯಂತರ ಆದೇಶ ನೀಡಿದೆ. ಎಂಟು ವಾರದೊಳಗೆ ತೀರ್ಪು ಅನುಷ್ಠಾನದ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದೆ. 2009ಕ್ಕೆ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳನ್ನು ತಲೆ ಎತ್ತಲು ಬಿಡಬೇಡಿ ಅಂತ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮೈಸೂರಿನ ಕ್ಯಾತಮಾರನ ಹಳ್ಳಿಯಲ್ಲಿ ಮಸೀದಿ ತಲೆ ಎತ್ತಲು ಹೇಗೆ ಬಿಟ್ಡಿದ್ದೀರಾ?, ಇದರಿಂದ ರಾಜು ಮರ್ಡರ್ ಆಯಿತು" ಎಂದು ಪ್ರತಾಪ್ ಸಿಂಹ ಕಿಡಿಕಾರಿದರು.

"ರಾಜ್ಯ ಸರ್ಕಾರ ಮತ್ತೊಮ್ಮೆ ದೇವಾಲಯಗಳ ಪಟ್ಟಿ ಪರೀಲನೆ ಮಾಡಬೇಕು. 2010ರ ರಾಜ್ಯ ಸರ್ಕಾರದ ಆದೇಶವನ್ನು ತಕ್ಷಣ ವಾಪಸ್ ಪಡೆಯಬೇಕು. ಮತ್ತೊಮ್ಮೆ ಸುಪ್ರೀಂಕೋರ್ಟ್ ಮುಂದೆ ಪರಿಷ್ಕೃತ ಪಟ್ಟಿ ಸಲ್ಲಿಸಬೇಕು. ಸಾರ್ವಜನಿಕವಾಗಿ ತೊಂದರೆಯಾಗುವ ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳನ್ನು ಪ್ರತ್ಯೇಕ ಪ್ರಕರಣವಾಗಿ ಪರಿಗಣಿಸಿ. ಸ್ಥಳೀಯರೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಿ. ಇಲ್ಲವಾದರೆ ರಾಜ್ಯಾದ್ಯಂತ ದೇವಾಲಯಗಳನ್ನು ಉಳಿಸಿ ಎಂಬ ಅಭಿಯಾನ ಮಾಡಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದರು.

RELATED TOPICS:
English summary :Pratap Simha

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...