Fri,Apr26,2024
ಕನ್ನಡ / English

ಎತ್ತಿನಹೊಳೆ ಯೋಜನೆ ಸಂಬಂಧ ಸದ್ಯದಲ್ಲೇ ಸಭೆ : ಸಿಎಂ ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್

14 Sep 2021
2497

ಬೆಂಗಳೂರು : ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಸದ್ಯದಲ್ಲೇ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ಕೊರಟಗೆರೆ ಶಾಸಕ, ಮಾಜಿ ಸಚಿವ ಡಾ. ಜಿ ಪರಮೇಶ್ವರ್ ಅವರು ಎತ್ತಿನಹೊಳೆ ಯೋಜನೆಯ ಬೈರಗೊಂಡ್ಲು ಜಲಾಶಯದ ಭೂಸ್ವಾಧೀನ ಪ್ರಕ್ರಿಯೆಯ ಸಮಸ್ಯೆಗಳ ಕುರಿತು ಪ್ರಶ್ನಿಸಿದರು. ಈ ವೇಳೆ ಅವರಿಗೆ ಜಲ ಸಂಪನ್ಮೂಲ ಸಚಿವರು ನೀಡಿದ ಉತ್ತರಕ್ಕೆ ಧ್ವನಿಗೂಡಿಸಿ ಎತ್ತಿನಹೊಳೆಯಿಂದ ನೀರು ಎತ್ತಿಯೇ ತೀರುತ್ತೇವೆ ಎಂದು ಸಿಎಂ ತಿಳಿಸಿದರು.

ಪ್ರಮುಖವಾಗಿ ಭೂಸ್ವಾಧೀನ ಸಮಸ್ಯೆಯನ್ನು ಪರಿಹರಿಸಬೇಕಿದೆ. ಸಮತೋಲಿತ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಿಸಬೇಕಿದೆ. ಹೀಗಾಗಿ 12 ಸಾವಿರ ಕೋಟಿ ರೂ. ಯೋಜನೆ. 23 ಸಾವಿರ ಕೋಟಿ ರೂ.ಗೆ ಏರಿಕೆ ಯಾಗಿದೆ ಎಂದರು.

ಯೋಜನೆಯ ಉದ್ದೇಶ ಸಫಲವಾಗಬೇಕಿದ್ದರೆ, ಜಲಾಶಯಗಳ ಸಾಮರ್ಥ್ಯಯವನ್ನು ಹೆಚ್ಚಿಸದಿದ್ದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಪೂರೈಕೆ ಮಾಡಲು ಸಾಧ್ಯವಾಗುವುದಿಲ್ಲ. ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಲು ಸಂಕಲ್ಪ ಮಾಡಿದ್ದು, ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಹೇಳಿದರು.

ಇದಕ್ಕೂ ಮುನ್ನ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಎತ್ತಿನ ಹೊಳೆ ಪ್ರದೇಶಕ್ಕೆ ತಾವು ಭೇಟಿ ನೀಡಿದ್ದು, ಕೆಲವು ಕಡೆ ಭೂಸ್ವಾಧೀನ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಮತ್ತೆ ಕೆಲವು ಕಡೆ ಸಮಸ್ಯೆ ಬಗೆಹರಿಸಲು ಭೂಸ್ವಾಧೀನ ಅಧಿಕಾರಿಗಳಿಗೆ ಗಡವು ನೀಡಲಾಗಿದೆ. ಶೇ.90ರಷ್ಟು ಕಾಮಗಾರಿ ಮುಗಿದಿದೆ. ಇನ್ನೂ ಅನೇಕ ಸಣ್ಣಪುಟ್ಟ ಸಮಸ್ಯೆಗಳಿವೆ. ಇದನ್ನು ಪರಿಹರಿಸಲು ಈ ಭಾಗದ ಎಲ್ಲಾ ಶಾಸಕರ ಸಭೆ ಕರೆದು ಚರ್ಚೆ ಮಾಡಿ ಪ್ರಾಯೋಗಿಕವಾಗಿ ನೀರು ಹರಿಸಿ ಜನರಲ್ಲಿ ವಿಶ್ವಾಸ ಮೂಡಿಸಲಾಗುವುದು ಎಂದರು.

ಎತ್ತಿನಹೊಳೆಯಂತಹ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಗೆ ಇರುವ ಅಡ್ಡಿ ಆತಂಕ ಪರಿಹರಿಸಿ ತಕ್ಷಣ ಕ್ರಮಕೈಗೊಳ್ಳಲು ಕಾರ್ಯಪ್ರವೃತ್ತರಾಗಿದ್ದೇವೆ. ಆದಷ್ಟು ಬೇಗ ಫಲಿತಾಂಶ ನಿಮ್ಮ ಕಣ್ಣಿಗೆ ಕಾಣಿಸಲಿದೆ ಎಂದು ಹೇಳಿದರು.ಭೂಸ್ವಾಧೀನ ಪ್ರಕ್ರಿಯೆಗೆ 195 ಕೋಟಿ ರೂ. ಹಣ ಒದಗಿಸಲಾಗಿದೆ.

ಆದರೂ ಕೆಲ ಅಧಿಕಾರಿಗಳು ರೈತರಿಗೆ ಹಣವಿಲ್ಲವೆಂದು ಹೇಳುತ್ತಿದ್ದರು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಪ್ರಕರಣಗಳಲ್ಲಿ ರೈತರಿಗೆ ಹಣಪಾವತಿ ಮಾಡುವುದು ವಿಳಂಬವಾದಲ್ಲಿ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು ಎಂದು ಸಚಿವರು ವಿವರಿಸಿದರು.

RELATED TOPICS:
English summary :Basavaraj bommai

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...