ಮಹಿಳೆಯ ಜತೆ ಅನುಚಿತ ವರ್ತನೆ: ಕ್ಲರ್ಕ್ಗೆ ಧರ್ಮದೇಟು ಕೊಟ್ಟು ಪೊಲೀಸರ ವಶಕ್ಕೆ ನೀಡಿದ ಗ್ರಾಮಸ್ಥರು! | Janata news
ಕೊಪ್ಪಳ: : ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ಗ್ರಾಮಸ್ಥರೇ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ.
ತಳಕಲ್ ಗ್ರಾಮದ ಮಹಿಳೆಯೊಂದಿಗೆ ಅನುಚಿತ ವರ್ತನೆ ಮಾಡಿದ್ದ ಕುಕನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್ ಹನುಮಂತಪ್ಪಗೆ ತಳಕಲ್‌ನಲ್ಲಿ ಸ್ಥಳೀಯರು ಥಳಿಸಿದ ವಿಡಿಯೋ ವೈರಲ್ ಆಗಿದೆ.
ಮದ್ಯದ ಅಮಲಿನಲ್ಲಿದ್ದ ಹನುಮಂತಪ್ಪ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ್ದ ಹೀಗಾಗಿ ಹನುಮಂತಪ್ಪನ ಕೈಕಾಲು ಕಟ್ಟಿ ಹಾಕಿ ಸ್ಥಳೀಯರು ಹಿಗ್ಗಾ ಮುಗ್ಗ ಥಳಿಸಿದ್ದಾರೆ.
ಕೊನೆಗೆ ಗ್ರಾಮಸ್ಥರು ಆರೋಪಿ ಹನುಮಂತಪ್ಪನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಸದ್ಯ ಹನುಮಂತಪ್ಪನು ನ್ಯಾಯಾಂಗ ಬಂಧನದಲ್ಲಿದ್ದಾನೆ.
English summary :Koppala